ಭಾರತದ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಇಂದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಈ ಹಿಂದೆ ಮಿಥಾಲಿ ಭಾರತದ ಪರ ಮೂರು ಮಾದರಿಯ ಕ್ರಿಕೆಟ್ ಗೆ ನಾಯಕಿಯಾಗಿದ್ದರು. ಬುಧವಾರ ಮಧ್ಯಾಹ್ನ ಮಿಥಾಲಿ ರಾಜ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ವಿದಾಯದ ಕುರಿತು ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಮಿಥಾಲಿ ತನ್ನ 23 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಬದುಕಿಗೆ ಗುಡ್ ಬೈ ಹೇಳಿದ್ದಾರೆ.
ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ ಮಿಥಾಲಿ ತನ್ನ ವಯಸ್ಸಿನ 39ನೇ ವರ್ಷದಲ್ಲಿ ಮಿಥಾಲಿ ತನ್ನ ವೃತ್ತಿ ಬದುಕಿಗೆ ವಿಧಾಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಿಥಾಲಿ, ‘ಮೊಟ್ಟ ಮೊದಲ ಬಾರಿಗೆ ನೀಲಿ ಬಣ್ಣದ ಜರ್ಸಿ ತೊಟ್ಟು ನಾನು ನನ್ನ ದೇಶವನ್ನು ಪ್ರತಿನಿಧಿಸಿದ್ದಾಗ ಓರ್ವ ಪುಟ್ಟ ಬಾಲಕಿಯಾಗಿದ್ದೆ. ಅತ್ಯಂತ ದೀರ್ಘ ಕಾಲದ ನನ್ನ ಕ್ರಿಕೆಟ್ ಪಯಣದಲ್ಲಿ ಸಾಕಷ್ಟು ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದೇನೆ. 23 ವರ್ಷಗಳ ನನ್ನ ವೃತ್ತಿ ಜೀವನ, ನನ್ನ ಜೀವನದ ಅತ್ಯುನ್ನದ ಕ್ಷಣಗಳಲ್ಲಿ ಒಂದಾಗಿದೆ. ಪ್ರತಿಯೊಂದು ಪಯಣದಂತೆ ಈ ಪಯಣವೂ ಕೂಡ ಅಂತ್ಯವಾಗಿದೆ ಹಾಗೂ ಇಂದು ನಾನು ಅಂತರರಾಷ್ಟ್ರೀಯ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೆ ನಿವೃತ್ತಿಯನ್ನು ಘೋಷಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಮಹಿಳಾ ಕ್ರಿಕೆಟ್ ನ ತೆಂಡೂಲ್ಕರ್ ಎಂದೇ ಖ್ಯಾತಿ ಪಡೆದಿದ್ದ ಮಿಥಾಲಿ, ಭಾರತದಲ್ಲಿ ಮಿಥಾಲಿ ರಾಜ್ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತೆಂಡೂಲ್ಕರ್ ಎಂದೇ ಖ್ಯಾತಿ ಪಡೆದಿದ್ದರು. ಮಿಥಾಲಿ ತನ್ನ ಸುದೀರ್ಘ 23 ವರ್ಷಗಳ ವೃತ್ತಿ ಜೀವನದಲ್ಲಿ ಹಲವಾರು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ತನ್ನ ವೃತ್ತಿ ಜೀವನದಲ್ಲಿ 232 ಏಕದಿನ ಪಂದ್ಯಗಳನ್ನು ಆಡಿರುವ ಮಿಥಾಲಿ 7805 ರನ್ ಗಳಿಸಿದ್ದಾರೆ.
ಮಿಥಾಲಿ ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮಹಿಳಾ ಕ್ರಿಕೆಟಿಗರಾಗಿದ್ದಾರೆ. 50.68 ಸರಾಸರಿಯಲ್ಲಿ ರನ್ ಗಳಿಸಿರುವ ಮಿಥಾಲಿ ತನ್ನ ಇಡೀ ವೃತ್ತಿಜೀವನದಲ್ಲಿ 7 ಶತಕ ಮತ್ತು 64 ಅರ್ಧ ಶತಕಗಳನ್ನು ಗಳಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5