ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸು ಆಗುವವರೆಗೂ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿಂತಲ್ಲೇ ಕೆಲ ಲಾರಿಗಳು ನಿಂತಿದೆ. ರಾಜ್ಯದಲ್ಲಿ ಚನ್ನಾರೆಡ್ಡಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.
ಚನ್ನಾರೆಡ್ಡಿ ಕರ್ನಾಟಕ ರಾಜ್ಯದ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾಗಿದ್ದು, ರಾಜ್ಯದಲ್ಲಿ ಲಾರಿ ಮಾಲೀಕರ ಹೋರಾಟಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆಯಿಂದ ಲಾರಿ ಸಂಚಾರ ಯಥಾಸ್ಥಿತಿ ಇದೆ.
ಕೇಂದ್ರ ಸರ್ಕಾರದ ಹಿಟ್ ಆ್ಯಂಡ್ ರನ್ ಕಾಯ್ದೆ ಭಾರೀ ವಿರೋಧ ವ್ಯಕ್ತವಾಗಿದ್ದು, ನಿನ್ನೆ ಮಧ್ಯರಾತ್ರಿ ಯಿಂದ ಲಾರಿ ಸಂಚಾರ ಸ್ಥಗಿತಗೊಳಿಸಿ ಲಾರಿ ಮಾಲೀಕರು ಹೋರಾಟ ಮಾಡ್ತಿದ್ದಾರೆ. ಅಗತ್ಯ ಸೇವೆ ಹೊರತುಪಡಿಸಿ ವಾಣಿಜ್ಯ ಸೇವೆಯ ಲಾರಿಗಳ ಸಂಚಾರ ಸ್ಥಗಿತವಾಗಿದೆ. ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸು ಆಗುವವರೆಗೂ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.


