ಚುನಾವಣಾ ಆಯೋಗ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾಗಿದೆ. ಮೊದಲು ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿತ್ತು. ಇದೀಗ ದಿನಂಕವನ್ನು ಒಂದು ದಿನ ಮುಂದೂಡಲಾಗಿದ್ದು, ಡಿಸೆಂಬರ್ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.
ಇನ್ನು, ಮೊದಲೇ ಘೋಷಿಸಿದಂತೆ ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಚುನಾವಣಾ ಫಲಿತಾಂಶ 3ನೇ ಭಾನುವಾರ ಪ್ರಕಟವಾಗಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ.


