nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026
    Facebook Twitter Instagram
    ಟ್ರೆಂಡಿಂಗ್
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    • ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    • ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ತಾಕುಗಳಲ್ಲಿ ಪ್ರಾತ್ಯಕ್ಷತೆ ಕಾರ್ಯಕ್ರಮ: ಕಡಿಮೆ ಸಂಖ್ಯೆಯಲ್ಲಿ ಭಾಗಿಯಾದ ರೈತರು | ಅಧಿಕಾರಿಗಳ ವಿರುದ್ಧ ಶಾಸಕ ಎಂ.ಟಿ. ಕೃಷ್ಣಪ್ಪ ಗರಂ
    ತುರುವೇಕೆರೆ January 3, 2024

    ರೈತರ ತಾಕುಗಳಲ್ಲಿ ಪ್ರಾತ್ಯಕ್ಷತೆ ಕಾರ್ಯಕ್ರಮ: ಕಡಿಮೆ ಸಂಖ್ಯೆಯಲ್ಲಿ ಭಾಗಿಯಾದ ರೈತರು | ಅಧಿಕಾರಿಗಳ ವಿರುದ್ಧ ಶಾಸಕ ಎಂ.ಟಿ. ಕೃಷ್ಣಪ್ಪ ಗರಂ

    By adminJanuary 3, 2024No Comments2 Mins Read
    m t krishnappa

    ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ತುಮಕೂರು ಇವರ ವತಿಯಿಂದ “ರೈತರ ತಾಕುಗಳಲ್ಲಿ ಪ್ರಾತ್ಯಕ್ಷತೆ ಕಾರ್ಯಕ್ರಮ” ತೆಂಗಿನ ಬೆಳೆಗಳಿಗೆ ರೋಗನಿರ್ವಹಣೆ ವಿಚಾರ ಸಂಕೀರ್ಣ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪ, ಈ ಕಾರ್ಯಕ್ರಮಕ್ಕೆ ದಬ್ಬೇಘಟ್ಟ ಹೋಬಳಿಯಿಂದ ಸಾಕಷ್ಟು ರೈತರು ಬರುವ ನಿರೀಕ್ಷೆಯಿತ್ತು ತೋಟಗಾರಿಕಾ ಇಲಾಖೆಯ ಸಿಬ್ಬಂದಿಗಳಿಂದ ರೈತರಿಗೆ ಸರಿಯಾದ ಮಾಹಿತಿ ದೊರಕದೆ ರೈತರು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರಲ್ಲದೇ,   ಈ ಕಾರ್ಯಕ್ರಮ ನನಗೆ ತೃಪ್ತಿ ತಂದಿಲ್ಲ ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ರೈತರಿಗೆ ಸರಿಯಾಗಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

    ದಬ್ಬೇಘಟ್ಟ ಹೋಬಳಿಯು ತೀರಾ ಹಿಂದುಳಿದಿದ್ದು ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ ಇದನ್ನು ಮನಗಂಡು ನಾನು ಕಳೆದ ಬಾರಿ ಶಾಸಕನಾಗಿದ್ದಾಗ ಮಲ್ಲಾಘಟ್ಟ ಹಿನ್ನೀರಿನಿಂದ  ಏತನೀರಾವರಿಗೆ ಯೋಜನೆಯನ್ನು ರೂಪಿಸಿ, ಅದನ್ನು ಜಾರಿಗೊಳಿಸಲು ಸಾಕಷ್ಟು ಶ್ರಮವಹಿಸಿದ್ದೇನೆ.  ಇದರಿಂದ ಹೋಬಳಿಯ ಸುಮಾರು ಕೆರೆಗಳಿಗೆ ನೀರು ಹರಿಯಲಿದ್ದು,  ಈ ಭಾಗದ ರೈತರಿಗೆ ಉಪಯೋಗವಾಗಲಿದೆ ಹಾಗೂ ರೈತರ ಋಣ ತೀರಿಸಲು ಸಣ್ಣ ಪ್ರಯತ್ನ ಮಾಡಿದ್ದೇನೆ   ತೋಟಗಾರಿಕೆ ಇಲಾಖೆಯ  ಅಧಿಕಾರಿಗಳು ಬರಗಾಲವಾಗಿರುವುದರಿಂದ  ಪ್ರತಿ ಮನೆಮನೆಗೂ ತೆರಳಿ ಸರ್ಕಾರದಿಂದ ದೊರೆಯುವ ಯೋಜನೆಗಳನ್ನು ರೈತರಿಗೆ ತಲುಪಿಸುವಂತ ಪ್ರಾಮಾಣಿಕ ಪ್ರಯತ್ನ ಮಾಡಿಯೆಂದು ಸೂಚಿಸಿದರು.

    ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆಂಜನೇಯ ರೆಡ್ಡಿ ಮಾತನಾಡಿ, ಈ ಹೋಬಳಿಯಲ್ಲಿ ತೆಂಗುಬೆಳೆಯ ಮತ್ತು ಅಡಿಕೆ ಬೆಳೆಯ ವಿಸ್ತೀರ್ಣ ವನ್ನು ತಿಳಿಸಿ, ರೈತರಿಗೆ ಇಲಾಖೆಯಿಂದ ದೊರೆಯುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

    ತೆಂಗು ಬೆಳೆಗಳ ನಿರ್ವಹಣೆ ಮತ್ತು ರೋಗಗಳ ಬಗ್ಗೆ ಕೆವಿಕೆ ಕೊನೇಹಳ್ಳಿ ವಿಜ್ಞಾನಿ ಡಾ.ಕೀರ್ತಿಶಂಕರ ರವರು ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ನೀಡಿದರು.

    ರೈತರಿಗೆ ತೆಂಗು, ನಿಂಬೆ ,ಲವಂಗದ ಸಸಿಗಳು ಹಾಗೂ ಟ್ರೈಕೋಡರ್ಮಾ ಜೈವಿಕ ಗೊಬ್ಬರವನ್ನು ಉಚಿತವಾಗಿ ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎನ್.ಆರ್.ಜಯರಾಮ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜಣ್ಣ, ಎ.ಪಿ.ಎಂ.ಸಿ. ಮಾಜಿಸದಸ್ಯ ವಿಜಯೇಂದ್ರ,ಬಿ.ಎಸ್ ದೇವರಾಜ್, ರಾಜ್ ಕುಮಾರ್,  ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ರೇವಣ್ಣ ಸೇರಿದಂತೆ ರೈತರು ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.

    ವರದಿ: ಸುರೇಶ್‌ ಬಾಬು ಎಂ., ತುರುವೇಕೆರೆ 

    admin
    • Website

    Related Posts

    ಮಾಹಿತಿ ಹಕ್ಕು ಕಾಯ್ದೆಯಡಿ ತಪ್ಪು ದಾಖಲೆ ನೀಡಿದ ಆರೋಪ: ರೈತ ಸಂಘಟನೆಗಳಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    October 19, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ…

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.