nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    Uncategorized August 12, 2026

    ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    By Ganesh TumkuruAugust 12, 2026No Comments2 Mins Read
    sargur

    ಸರಗೂರು: ಕ್ಷೇತ್ರದ ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಬಹುತೇಕ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲ್ಲೂಕಿನ ದೇವಲಾಪುರ ಹುಂಡಿ, ಬಾಡಗ, ಹೊಸಕೋಟೆ, ಕಂದಲಿಕೆ ತಿಟ್ಟು, ಮೊಳೆಯೂರು, ನಡಾಡಿ, ಬಂಕವಾಡಿ, ಗದ್ದೆಹಳ್ಳ ಮತ್ತು ಸಾಗರೆ ಗ್ರಾಮಗಳಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸುಮಾರು ರೂ. 3.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

    ಮೈಸೂರು-ಮಾನಂದವಾಡಿ ರಸ್ತೆ ಅಗಲೀಕರಣ: ಮೈಸೂರು-ಮಾನಂದವಾಡಿ ೪ ಪಥದ ರಸ್ತೆ ಅಗಲೀಕರಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ (ಜನವರಿಯಲ್ಲಿ) ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.

    ಜಿಲ್ಲೆಯಲ್ಲೇ ಅತ್ಯಂತ ವಿಶಾಲವಾದ ಹಾಗೂ ಹಿಂದುಳಿದ ತಾಲೂಕಾಗಿದ್ದರೂ, ಕಾಂಗ್ರೆಸ್ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿದೆ. ಮಾಜಿ ಶಾಸಕ ದಿ. ಚಿಕ್ಕಮಾದು ಹಾಗೂ ಮಾಜಿ ಸಂಸದ ದಿ. ಆರ್. ಧ್ರುವನಾರಾಯಣ್ ಅವರು ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಸ್ಮರಣೀಯ ಎಂದರು.

    ಮೂಲಸೌಕರ್ಯ ಹಾಗೂ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರ: ಸರಗೂರು ಮತ್ತು ಕೋಟೆ ಅವಳಿ ತಾಲೂಕುಗಳ ಪ್ರತಿ ಗ್ರಾಮಕ್ಕೂ ಮೂಲಸೌಕರ್ಯ, ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಕಲ್ಪಿಸಲಾಗಿದೆ. ಹಾಡಿ ಜನರಿಗೆ ಪಡಿತರ ಹಾಗೂ ಕೆರೆ ತುಂಬಿಸುವ ಭರವಸೆ: ಕಾಡಂಚಿನ ಹಾಡಿ ಜನರಿಗೆ ಹಿಂದೆ ಇದ್ದ 6 ತಿಂಗಳ ಪಡಿತರ ವಿತರಣೆಯನ್ನು ಸರ್ಕಾರದ ಗಮನ ಸೆಳೆದು ವರ್ಷಪೂರ್ತಿ ಸಿಗುವಂತೆ ಮಾಡಲಾಗಿದೆ. ಮಳೆ ಕೊರತೆಯಿಂದ ಒಣಗುತ್ತಿರುವ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನ ಪುನರಾರಂಭಿಸಲು ಸರ್ಕಾರದ ಮಟ್ಟದಲ್ಲಿ ಶ್ರಮಿಸಲಾಗುವುದು ಎಂದು ತಿಳಿಸಿದರು.

    ಕಾರ್ಯಕ್ರಮದ ವೇಳೆ ಕಾಡಂಚಿನ ಗ್ರಾಮಸ್ಥರು ಕಾಡುಪ್ರಾಣಿಗಳ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಇದೇ ವೇಳೆ ‘ಬೇಲದಕುಪ್ಪೆ ಜಾತ್ರೆ’ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರ್ವಜನಿಕರು ಕೋರಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಶಾಸಕರು, ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ತ್ಯಾಗರಾಜು ಅವರಿಗೆ ದೂರವಾಣಿ ಕರೆ ಮಾಡಿ ಜಾತ್ರೆಗೆ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದರು.

    ಕಾಂಗ್ರೆಸ್ ಮುಖಂಡರಾದ ದೇವಲಾಪುರ ಸಿದ್ದರಾಜು ಮತ್ತು ಬಿ.ಮಟಕೆರೆ ಅಣ್ಣಯ್ಯಸ್ವಾಮಿ ಮಾತನಾಡಿ, “ಶಾಸಕ ಅನಿಲ್ ಚಿಕ್ಕಮಾದು ಅವರು ನುಡಿದಂತೆ ನಡೆದುಕೊಳ್ಳುತ್ತಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಕೈಬಲಪಡಿಸುವುದು ಎಲ್ಲ ಸಮುದಾಯಗಳ ಕರ್ತವ್ಯ” ಎಂದರು.

    ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚೆನ್ನಿಪುರ ಚಲುವರಾಜು, ಇಂಟಕ್ ಜಿಲ್ಲಾಧ್ಯಕ್ಷ ಎಸ್.ಎನ್. ನಾಗರಾಜು, ಕೋಟೆ ಶಿವಪ್ಪ, ಮೊಳೆಯೂರು ಆನಂದ್, ಗುಣಪಾಲ್, ಶಂಭುಲಿಂಗನಾಯಕ, ದೇವಲಾಪುರ ಪ್ರಭಾಕರ್, ಎಂ.ಕೆ. ಹರಿದಾಸ್, ದೊಡ್ಡಪ್ಪಾಜಿ, ಗುಡಿಗೌಡ ಶೇಖರ್, ಲ್ಯಾಂಡ್ ಆರ್ಮಿ ಎಂಜಿನಿಯರ್‌ಗಳಾದ ಕೀರ್ತನ ಪ್ರಭು, ಅಭಿಷೇಕ್ ಹಾಗೂ ವಿವಿಧ ಗ್ರಾಮಗಳ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ…

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.