ಹೆಚ್.ಡಿ.ಕೋಟೆ: ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು
ಸಭೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳಿಂದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಯ ನ್ಯೂನತೆಗಳ ಬಗ್ಗೆ ಕ್ಷೇತ್ರಶಿಕ್ಷಣಾಧಿಕಾರಿ ಮಾರಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ತಾಲ್ಲೂಕಿನಲ್ಲಿ ನಿಗದಿತ ಸಮಕ್ಕೆ ಸರಿಯಾಗಿ ಶಿಕ್ಷಕರು ತರಗತಿಗೆ ತೆರಳುತಿಲ್ಲ ಮತ್ತು ಮದ್ಯಪಾನವನ್ನು ಮಾಡಿ ಶಾಲೆಗೆ ತೆರಳುತ್ತಾರೆ ಎಂಬುದಾಗಿ ಸಾರ್ವಜನಿಕ ವಲಯದಲ್ಲಿ ದೂರು ಕೇಳಿಬರುತ್ತಿದ್ದು, ಮದ್ಯಪಾನವನ್ನು ಮಾಡಿ ಶಾಲೆಗೆ ತೆರಳುವ ಶಿಕ್ಷಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈ ಗೊಳ್ಳಬೇಕೆಂದು ಹೆಚ್ಚರಿಕೆ ನೀಡಿದರು
ಮದ್ಯಪ್ರವೇಶಿಸಿದ ಜಿಲ್ಲಾಧಿಕಾರಿ ರಾಜೇಂದ್ರ ನೀವು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಮಾಹಿತಿಯನ್ನೇ ತಿಳಿದುಕೊಂಡಿಲ್ಲ ಅಂದರೆ ನೀವೇನು ಕಾರ್ಯನಿರ್ವಾಹಿಸುತ್ತೀರ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು
ಸರಿಯಾದ ಮತ್ತು ನಿಖರವಾದ ಮಾಹಿತಿಯನ್ನು ನೀಡದೆ ಶಾಸಕರ ಕೆಂಗಣ್ಣಿಗೆ ಗುರಿಯಾದ ಕ್ಷೇತ್ರಶಿಕ್ಷಣಾಧಿಕಾರಿ ಮಾರಯ್ಯ ಅವರನ್ನು ಹಾಗೂ ಇಲಾಖೆಯ ಎಲ್ಲ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.
ಸಾರ್ವಜನಿಕರಿಗೆ ಸೇವೆ ಸಲ್ಲಿಸಬೇಕೆಂಬ ಅಭಿಲಾಷೆ ಇದ್ದರೆ ತಾಲ್ಲೂಕಿನಲ್ಲಿ ಸೇವೆ ಸಲ್ಲಿಸಿ ಇಲ್ಲದಿದ್ದರೆ ವರ್ಗಾವಣೆ ಮಾಡಿಸಿಕೊಂಡು ಹೊರಟು ಹೋಗಿ. ನಮ್ಮ ಜನರಿಗೆ ಪ್ರಾಮಾಣಿಕ ಸೇವೆ ಸಲ್ಲಿಸುವ ಅಧಿಕಾರಿಗಳು ಬರುತ್ತಾರೆ ಎಂದು ಎಚ್ಚರಿಕೆ ನೀಡಿದರು.
ನಮ್ಮ ಜನರಿಗೆ ಮುಖ್ಯವಾಗಿ ಆರೋಗ್ಯ ಶಿಕ್ಷಣ ಅತ್ಯಾವಶ್ಯಕ ಆದ್ದರಿಂದ ಯಾವ ವೈದ್ಯರು ಅನಾವಶ್ಯಕವಾಗಿ ಖಾಸಗಿ ಆಸ್ಪತ್ರೆಗೆ ಕಳುಹಿಸಬಾರದು ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಪ್ರಯತ್ನಪಡಬೇಕು ಎಂದು ಕಿವಿ ಮಾತು ಹೇಳಿದರು
ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ ಹೆಚ್.ಡಿ.ಕೋಟೆ ದಂಡಾಧಿಕಾರಿ ಸಣ್ಣರಾಮಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್, ಶಾಸಕ ಅನಿಲ್ ಚಿಕ್ಕಮಾದು, ಸರಗೂರು ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ


