ದೇಶದಲ್ಲಿ ರಾಜಕೀಯ ವಾತಾವರಣ ಕಲುಷಿತವಾಗಿದ್ದು, ಮತ್ತೊಮ್ಮೆ ಸಂಪೂರ್ಣ ಕ್ರಾಂತಿಗೆ ದೇಶದ ನೆಲ ಹದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾರತ ಯಾತ್ರಾ ಕೇಂದ್ರ, ಲೋಕನಾಯಕ ಜೆ. ಪಿ. ವಿಚಾರ ವೇದಿಕೆ ಹಮ್ಮಿಕೊಂಡಿದ್ದ ಜಯಪ್ರಕಾಶ್ ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ. ಆರ್. ಪಾಟೀಲ ಅವರಿಗೆ ಜೆ. ಪಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ. ಎಲ್. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರ ನಿರ್ದೇಶಕ ಟಿ. ಎನ್. ಸೀತಾರಾಂ ಇತರರಿದ್ದರು.


