nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    ಚಿಕ್ಕನಾಯಕನಹಳ್ಳಿ April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    By adminApril 16, 2026No Comments2 Mins Read
    c b suresh

    ಚಿಕ್ಕನಾಯಕನಹಳ್ಳಿ: ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಕೈ ಬಿಡಲಾಗಿದೆ. ಈ ಬಗ್ಗೆ ಸದನದಲ್ಲಿ ಮಾತನಾಡಲಾಗುವುದು. ಈ ವಿಷಯವಾಗಿ ಇಂದೇ ಸರ್ಕಾರಕ್ಕೆ ಪತ್ರ ಬರೆದು ಶಿಕ್ಷಣವನ್ನು ಸಂವಿಧಾನ ಪೀಠಿಕೆಯಲ್ಲಿ ಸೇರಿಸಲು ಒತ್ತಾಯಿಸಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು.

    ಅವರು ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ರವರ 119ನೇ ಜನ್ಮ ದಿನ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ಎಲ್ಲಾ ದಾರ್ಶನಿಕರ ಜಯಂತಿಯನ್ನು ಒಂದೇ ದಿನ ಮಾಡಿದ್ದೆವು. ಅದರಿಂದ ನಾವೆಲ್ಲರು ಒಂದೇ ಎಂಬ ಭಾವನೆ ಮೂಡಿತ್ತು. ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು, ಅದೇ ರೀತಿ ನಾವೂ ಸಹ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಡುತ್ತಿದ್ದೇವೆ, ಎಲ್ಲಾ ಸಮುದಾಯದವರನ್ನು ಒಟ್ಟಿಗೆ ತೆಗೆದು ಕೊಂಡು ಹೋಗುತ್ತಿದ್ದೇವೆ ಎಂದರು.


    Provided by
    Provided by

    ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಆ ವ್ಯಕ್ತಿಗೆ ಸಿಗದೇ ಇರುವಂತಹ ಸೌಲಭ್ಯವನ್ನು ನೀಡಿದಾಗಲೇ ಅಂಬೇಡ್ಕರ್ ಕಂಡಂತಹ ಸಮಾನತೆಯ ಕನಸು ಸಾರ್ಥಕವಾಗುತ್ತದೆ. ಮೊಬೈಲ್ ಬಳಕೆ ಇರದ ದಿನಗಳಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ತಮ್ಮ ಅಪಾರ ಜ್ಞಾನದಿಂದ ಸಂವಿಧಾನ ರಚಿಸಿ ಜಗತ್ತಿಗೆ ನೀಡಿದವರು. ಬಾಬು ಜಗಜೀವನ್ ರಾಮ್ ದಮನಿತರಿಗೆ ಶಕ್ತಿ ತುಂಬಿದ್ದಾರೆ. ರಾಜಕಾರಣದಲ್ಲಿ ಅಂಬೇಡ್ಕರ್ ರಂತಹ ಮಹಾನ್ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿದರೆ ಜನರು ಸೋಲಿಸುತ್ತಾರೆ. ರಾಜಕಾರಣದಲ್ಲಿ ಹಣವೇ ಪ್ರಬಲ ಎಂದು ಸಾಬೀತಾಗಿದೆ ಎಂದು ಶಾಸಕರು ಹೇಳಿದರು.

    ತಹಶೀಲ್ದಾರ್ ಮಮತಾ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರು ಹಾಗೂ ಡಾ.ಬಾಬು ಜಗಜೀವನರಾಂ ರವರು ಇಬ್ಬರೂ ಮಹನೀಯರು ನಮಗೆ ಹಾಕಿಕೊಟ್ಟಂತಹ ಆದರ್ಶಗಳು ನಮಗೆ ಪ್ರೇರಣಾದಾಯಕ. ಅಂಬೇಡ್ಕರ್ ರವರು ಹೇಳುತ್ತಿದ್ದರು ನನ್ನನ್ನು ಅಪ್ಪಿಕೊಂಡಿದ್ದು ಪುಸ್ತಕ ಮಾತ್ರ, ಅವರ ಮಾತುಗಳು ಸತ್ಯ ಎಂದರು.

    ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ರವಿಕುಮಾರ್ ನೀಹ ಡಾ.ಬಾಬು ಜಗಜೀವನರಾಮರ ಕುರಿತು ಹಾಗೂ ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಅಧ್ಯಕ್ಷ ಡಾ.ಸಿ.ಜಿ.ಲಕ್ಷ್ಮೀಪತಿ ಡಾ.ಬಿ.ಆರ್.ಅಂಬೇಡ್ಕರ್ ರವರ ಕುರಿತು ಮಾತನಾಡಿದರು.

    ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬೇವಿನಹಳ್ಳಿ ಚನ್ನಬಸಪ್ಪ, ರಘುನಾಥ್ ಭದ್ರನಾಯಕನ ತಾಂಡ್ಯ, ರುದ್ರೇಶ್ ದಬ್ಬಗುಂಟೆ, ಚನ್ನಿಗರಾಯಪ್ಪ ಅಳೇಕಟ್ಟೆ, ವೆಂಕಟೇಶಯ್ಯ ದಬ್ಬಘಟ್ಟ, ಹನುಮಂತಪ್ಪ ಮೈಲಕಟ್ಟೆ, ಕನ್ನಡ ಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿ, ಕಳ್ಳೇನಹಳ್ಳಿ ಸಣ್ಣಮ್ಮ ಶಂಕರ್ ಬರಕನಾಹಾಲ್, ಮುಂಬಭಾಗವಿ, ದಿಲೀಪ್ ಅಳೇಕೆರೆ ಹಾಗೂ 2024–25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಆರಂಭಕ್ಕೂ ಮೊದಲು ತಾಲ್ಲೂಕು ಕಚೇರಿ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಗೂ ಮಹಾತ್ಮ ಗಾಂಧೀಜಿಯವರ ಪುತ್ಥಳಿಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

    ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಮಾಜ ಕಲ್ಯಾಣಾಧಿಕಾರಿ ಶ್ರೀ ಧರ್ಮಮೂರ್ತಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    1 ಗಂಟೆಗೆ ಸೀಮಿತವಾದ ಹುಳಿಯಾರು ಪ.ಪಂ. ಸಾಮಾನ್ಯ ಸಭೆ: ವಿಷಯ ಚರ್ಚೆ ನಡೆಯದೆ ಪಾಸ್

    April 4, 2026

    ಪಿಗ್ಮಿ ಹಣ ಗುಳುಂ: ಸಂಕಷ್ಟದಲ್ಲಿರುವ ಜನರ ಸಮಸ್ಯೆಗೆ ಕಿವಿಯಾದ ಶಾಸಕ ಸುರೇಶ್‌ ಬಾಬು

    April 4, 2026

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಗುಬ್ಬಿ: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು. ಮಹಿಳೆಯರಿಗೆ…

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.