ಬೆಂಗಳೂರು: ನೀವು ಮೊದಲ ಬಾರಿ ಶಾಸಕರಲ್ಲ, ಪರ್ಮನೆಂಟ್ ಶಾಸಕರಾಗಿರಬೇಕು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಶಾಸಕರ ತರಬೇತಿ ಶಿಬಿರದಲ್ಲಿ ಸಲಹೆ ನೀಡಿದ ಖಾದರ್, ವಿಧಾನಸಭೆ ಒಳಗೆ ಆತ್ಮವಿಶ್ವಾಸದಿಂದ ಇರಲು ಈ ಶಿಬಿರ ಅನುಕೂಲ. ಈ ಶಿಬಿರದಲ್ಲಿ ಆರೋಗ್ಯದ ಬಗ್ಗೆಯೂ ಶಾಸಕರಿಗೆ ತರಬೇತಿ ನೀಡಲಾಗುತ್ತೆ ಎಂದರು.
ರಾಜಕೀಯ ಒಂದು ಸರ್ಕಸ್ ಕಂಪನಿ ಇದ್ದ ಹಾಗೆ. ಈ ಸರ್ಕಸ್ ಕಂಪನಿಯಲ್ಲಿ ಹುಲಿ, ಸಿಂಹ, ಕೋತಿ, ಆನೆ ಎಲ್ಲವೂ ಇರುತ್ತೆ. ರಾಜಕೀಯದಲ್ಲೂ ಹಾಗೆ ಎಲ್ಲರೂ ಸಿಂಹ ಆಗಲು ಸಾಧ್ಯವಿಲ್ಲ. ಸರ್ಕಸ್ನಲ್ಲಿ ರಿಂಗ್ ಮಾಸ್ಟರ್ ಹಿಂದೆ ಎಲ್ಲಾ ಪ್ರಾಣಿಗಳು ಹೋಗುತ್ತವೆ. ಹಾಗೆ ನೀವು ರಾಜಕೀಯದಲ್ಲಿ ರಿಂಗ್ ಮಾಸ್ಟರ್ ಆಗಬೇಕು ಎಂದರು.
ಶಾಸಕರು ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸಬೇಕು ಎಂದು ನೂತನ ಶಾಸಕರ ತರಬೇತಿ ಶಿಬಿರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಶಾಸಕರಿಗೆ ಮಾರ್ಗದರ್ಶನ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA