nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮುಲ್ ಅಧ್ಯಕ್ಷರಾಗಿ ಶಾಸಕ ಹೆಚ್.ವಿ.ವೆಂಕಟೇಶ್ ಆಯ್ಕೆ: ಹೇಗಿತ್ತು ಚುನಾವಣಾ ಸಮರ!?
    ತುಮಕೂರು January 23, 2025

    ತುಮುಲ್ ಅಧ್ಯಕ್ಷರಾಗಿ ಶಾಸಕ ಹೆಚ್.ವಿ.ವೆಂಕಟೇಶ್ ಆಯ್ಕೆ: ಹೇಗಿತ್ತು ಚುನಾವಣಾ ಸಮರ!?

    By adminJanuary 23, 2025No Comments3 Mins Read
    tumul

    ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಇದರಿಂದ ಮೊದಲ ಬಾರಿಗೆ ನಾಮನಿರ್ದೇಶಕರಿಗೆ ಶಾಸಕರೊಬ್ಬರು ತುಮುಲ್ ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತುಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್ ಡಿ ಎ ಅಭ್ಯಥಿಯಾಗಿ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದ್ದರು.


    Provided by
    Provided by

    ಮಧ್ಯಾಹ್ನ 12 ಗಂಟೆಯಾದರೂ ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು. ನಂತರ ಮತದಾನ ನಡೆದು ಶಾಸಕ ಹೆಚ್.ವಿ.ವೆಂಕಟೇಶ್ ಅವರು 9 ಮತಗಳನ್ನು ಪಡೆದರೆ, ಎಸ್.ಆರ್.ಗೌಡ 5 ಮತಗಳನ್ನು ಪಡೆದ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

    ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿ ನಡೆದಿತ್ತು. ಆದರೆ ಇತ್ತೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರನ್ನು ಸರಕಾರ ನಾಮನಿರ್ದೇಶನ ಸದಸ್ಯರಾಗಿ ನೇಮಕ ಮಾಡಿತ್ತು.

    ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ನಾಮ ನಿರ್ದೇಶನ ಸದಸ್ಯರಾದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಎರಡು ನಾಮಪತ್ರ ಹಾಗೂ ಎನ್ ಡಿ ಎ ಅಭ್ಯಥಿಯಾಗಿ ಸಿರಾ ತಾಲ್ಲೂಕು ನಿರ್ದೇಕರ  ಎಸ್.ಆರ್.ಗೌಡ ಅವರು ನಾಮಪತ್ರ ಸಲ್ಲಿಸಿದ್ದರು. ಇದೇ ಮೊದಲ ಬಾರಿಗೆ ತುಮುಲ್ ಇತಿಹಾಸದಲ್ಲಿ ನಾಮನಿರ್ದೇಶಿತ ಸದಸ್ಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ತುಮುಲ್ ನಲ್ಲಿ 10 ಮಂದಿ ಚುನಾಯಿತ ನಿರ್ದೇಶಕರಿದ್ದರು,  ನಾಮ ನಿರ್ದೇಶಿತರು ಹಾಗೂ ಅಧಿಕಾರಿಗಳು ಸೇರಿ ಒಟ್ಟು 15 ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದರು. ಈ ಪೈಕಿ ಕಾಂಗ್ರೆಸ್ ಬೆಂಬಲಿತ  ನಿರ್ದೇಶಕ ಐವರು, ಒಬ್ಬರು ಕೆಎಂಎಫ್ ಪ್ರತಿನಿಧಿ, ಒಬ್ಬರು ಸರಕಾರದಿಂದ ನಾಮ ನಿರ್ದೇಶಿತ ಸದಸ್ಯರು , ಜಿಲ್ಲಾ ಸಹಕಾರ ಸಂಘಗಳ ಜಂಟಿ ನಿಬಂಧಕರು, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರು, ಎನ್ಡಿಹಡಿಬಿಯ ಒಬ್ಬರು ಮತ ಚಲಾಯಿಸುವ ಹಕ್ಕು ಹೊಂದಿದ್ದರು.

    ಈ ಬಾರಿ ತುಮುಲ್ ಅಧ್ಯಕ್ಷ ಸ್ಥಾನದ ಗದ್ದುಗೆಗೇರಲು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರವರ ಪತ್ನಿ ಭಾರತಿದೇವಿ, ಮಧುಗಿರಿಯ ನಿರ್ದೇಶಕ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಗೇಶ್ ಬಾಬು, ಸಿರಾ ನಿರ್ದೇದಶಕ ಎಸ್.ಆರ್. ಗೌಡ, ತಿಪಟೂರು ತಾಲ್ಲೂಕು ಮಾದಿಹಳ್ಳಿ ಪ್ರಕಾಶ್ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ನಿನ್ನೆಯಿಂದೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಚುನಾಯಿತ ಸದಸ್ಯರ ಎಲ್ಲ ಕಸರತ್ತುಗಳಿಗೆ ತೆರೆ ಬಿದ್ದಿತು.

    ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹೆಚ್.ವಿ. ವೆಂಕಟೇಶ್ ಅವರು, ತುಮಕೂರು ಹಾಲು ಒಕ್ಕೂಟದಲ್ಲಿ ಎಲ್ಲ ನಿರ್ದೇಶಕರ ಸಹಕಾರ ಪಡೆದು ಉತ್ತಮವಾಗಿ ಆಡಳಿತ ನಡೆಸುವುದಾಗಿ ತಿಳಿಸಿದರು. ತುಮಕೂರು ಹಾಲು ಒಕ್ಕೂಟದ ಎಲ್ಲ ನಿರ್ದೇಶಕರನ್ನು ಒಗ್ಗೂಡಿಸಿಕೊಂಡು ಉತ್ತಮವಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಒಕ್ಕೂಟದಲ್ಲಿ ಅಗತ್ಯ ಇರುವ ಬದಲಾವಣೆ ತರಲು ಶ್ರಮಿಸುವುದಾಗಿ ತಿಳಿಸಿದರು.

    ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಪಕ್ಷದ ಎಲ್ಲ ನಾಯಕರ ಆಶೀರ್ವಾದದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನನ್ನ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

    ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ವೆಂಕಟೇಶ್ ಅವರು ಗೆಲುವು ಸಾಧಿಸಿದ್ದರಿಂದ ಪಾವಗಡ ತಾಲ್ಲೂಕಿನಿಂದ ಆಗಮಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತ ಹಾಗೂ ಅವರ ಬೆಂಬಲಿಗರು ತುಮುಲ್ ಆಡಳಿತ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

    ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಹೆಚ್.ವಿ. ವೆಂಕಟೇಶ್ ಅವರನ್ನು ಒಕ್ಕೂಟದ ನಿರ್ದೇಶಕರಾದ ಹೆಚ್.ಎ.ನಂಜೇಗೌಡ, ಕೆ.ಪಿ. ಭಾರತಿದೇವಿ, ಬಿ.ಎನ್. ಶಿವಪ್ರಕಾಶ್, ಎಂ.ಕೆ.ಪ್ರಕಾಶ್, ಸಿ.ವಿ. ಮಹಲಿಂಗಯ್ಯ, ಡಿ. ಕೃಷ್ಣಕುಮಾರ್, ಬಿ. ನಾಗೇಶ್ ಬಾಬು, ಸಿದ್ದಗಂಗಯ್ಯ, ಎಸ್.ಆರ್. ಗೌಡ, ಚಂದ್ರಶೇಖರರೆಡ್ಡಿ, ಅಶ್ವತ್ಥ ನಾರಾಯಣ, ಆಡಳಿತಾಧಿಕಾರಿ ಉಮೇಶ್, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದಿಸಿದರು.

    ಇದಾದ ನಂತರ ನೂತನ ಅಧ್ಯಕ್ಷ ಹೆಚ್.ವಿ. ವೆಂಕಟೇಶ್ ಅವರು ಸಿದ್ಥಾರ್ಥ  ಮೆಡಿಕಲ್ ಕಾಲೇಜಿಗೆ ತೆರಳಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.  ಸಚಿವರು ಸಹ ನೂತನ ಅಧ್ಯಕ್ಷ ವೆಂಕಟೇಶ್ ರವರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ವೆಂಕಟರಮಣಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ…

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.