ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ತಲವಾರಿನಿಂದ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 11:30 ಗಂಟೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.
ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರು ನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy