ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್ ಪಿಪಿ) ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇದೇ ವೇಳೆ ಜನಾರ್ದನ ರೆಡ್ಡಿ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು. ಜನಾರ್ದನ ರೆಡ್ಡಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಬೆಂಗಳೂರಿನ ತಮ್ಮ ನಿವಾಸ ‘ಪಾರಿಜಾತ’ದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದ್ದರು ಎನ್ನಲಾಗಿದೆ.
ಜನಾರ್ದನ ರೆಡ್ಡಿ ಬಿಜೆಪಿಗೆ ವಾಪಸಾಗಿದ್ದರಿಂದ ಆನೆ ಬಲ ಬಂದಂತಾಗಿದೆ. ಜನಾರ್ದನರೆಡ್ಡಿ ಬಿಜೆಪಿಗೆ ವಾಪಸಾಗಿದ್ದರಿಂದ ಖುಷಿಯಾಗಿದೆ. ಅವರನ್ನ ಮುಂದಿನ ದಿನಗಳಲ್ಲಿ ಸೂಕ್ತವಾಗಿ ಬಳಸಿಕೊಳ್ಳುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296