ತುಮಕೂರು: ಜಿಲ್ಲೆ ತಿಪಟೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ರಾಷ್ಟ್ರೀಯ ಹೆದ್ದಾರಿ 206 ರ ಚತುಷ್ಪತ ರಸ್ತೆಗೆ ಸಂಪರ್ಕಿಸುವ 2 ಕಿಲೋ ಮೀಟರ್ ಚತುಷ್ಪಥ ನಗರ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ತಿಪಟೂರು ಶಾಸಕ ಕೆ.ಷಡಕ್ಷರಿ ಗುದ್ದಲಿಪೂಜೆ ನೆರವೇರಿಸಿದರು.
ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಕೆ.ಷಡಕ್ಷರಿ ಸರ್ಕಾರ ಎಸ್ ಎಸ್ ಟಿಪಿ ಯೋಜನೆ ಅಡಿ 20 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾಗಿದ್ದು,ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 8 ಕೋಟಿ ವೆಚ್ಚದ ನಗರ ಸಂಪರ್ಕ ಚತುಷ್ಪಥ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು.
ಹಾಲ್ಕುರಿಕೆ ರಸ್ತೆ ರಾಜ್ಯ ಹೆದ್ದಾರಿಯಾಗಿರುವ ಕಾರಣ ರಾಜ್ಯಹೆದ್ದಾರಿ ನಿಯಮಗಳಂತೆ ಕಾಮಗಾರಿ ನಡೆಸಲಾಗುತ್ತದೆ. ಹಾಲ್ಕುರಿಕೆ ರಸ್ತೆ ನಗರದಿಂದ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯಾಗಿರುವ ಕಾರಣ, ಅಪಘಾತಗಳು, ಹೆಚ್ಚಾದ ಹಿನ್ನೆಲೆ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಯಮುನಾ ಧರಣೇಶ್, ಉಪಾಧ್ಯಕ್ಷರಾದ ಮೇಘನಾ ಭೂಷಣ್, ನಗರಸಭಾ ಸದಸ್ಯರಾದ ಯೋಗೇಶ್, ಪ್ರಕಾಶ್, ಶಶಿಕಿರಣ್ ಲೋಕನಾಥ್ ಸಿಂಗ್, ಮುಖಂಡರಾದ ವಗನಘಟ್ಟ ಯೋಗಾನಂದ್, ಗುತ್ತಿಗೆದಾರ ಮಧು, ನಟರಾಜ್ ಮುಂತಾದವರು ಉಪಸ್ಥಿತರಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx