ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ದೊಡ್ಡಮಾಲೂರು ಪಂಚಾಯತಿ ವ್ಯಾಪ್ತಿಯಿಂದ ಸೂರ್ ನಾಗೇನಹಳ್ಳಿ ಗ್ರಾಮದಲ್ಲಿ ಜನಜೀವನ ಮಿಷನ್ ಯೋಜನೆಯಡಿಯಲ್ಲಿ ಸುಮಾರು 39 ಲಕ್ಷ ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಶಾಸಕರಾದ ಎಂ.ವಿ.ವೀರಭದ್ರಯ್ಯ ಚಾಲನೆ ನೀಡಿದರು.
ಗ್ರಾಮದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದೆನ್ನುವ ಉದ್ದೇಶದೊಂದಿಗೆ ಕೊಡಿಗೇನಹಳ್ಳಿ ದೊಡ್ಡಮಾಲೂರು ಪಂಚಾಯತಿ ವ್ಯಾಪ್ತಿಯಿಂದ ಸೂರ್ ನಾಗೇನಹಳ್ಳಿ ಗ್ರಾಮದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯ ಮುಖಂಡರು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು.
ವರದಿ : ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy