ಹಿರಿಯೂರು: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕಾರಿಗೆ ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಶಾಸಕರ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಹಿರಿಯೂರು ಮಾರ್ಗ ಮಧ್ಯೆ ತೆರಳುತ್ತಿದ್ದ ವೇಳೆ ಅತೀ ವೇಗ ಹಾಗೂ ಅಜಾಗರೋಕತೆಯಿಂದ ಬಂದ ಕಾರೊಂದು ಶಾಸಕರ ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಎಡ ಭಾಗಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯ ಅಧಿಕಾರಿ ಪಿ ಎಸ್ ಐ ಶಶಿಕಲಾ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5