ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರಿಗೆ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿ ಹನಿಟ್ರ್ಯಾಪ್ ಗೆ ಯತ್ನಿಸಿರುವ ಘಟನೆ ನಡೆದಿದೆ.
ಈ ಸಂಬಂಧ ಶಾಸಕ ತಿಪ್ಪಾರೆಡ್ಡಿ ಅವರು ಚಿತ್ರದುರ್ಗ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್ 31 ರಂದು ಯುವತಿಯೋರ್ವಳು ಶಾಸಕ ತಿಪ್ಪಾರಡ್ಡಿಗೆ ಬೆತ್ತಲೆಯಾಗಿ ಕಾಲ್ ಮಾಡಿದ್ದು, ನಂತರ ವಾಟ್ಸಪ್ ಗೆ ಅಶ್ಲೀಲ ವಿಡಿಯೋ ಕಳುಹಿಸಿದ್ದಾಳೆ ಎನ್ನಲಾಗಿದೆ.
ಈ ವೇಳೆ ಶಾಸಕ ತಿಪ್ಪರೆಡ್ಡಿ ಅವರು ತಕ್ಷಣ ಮೊಬೈಲ್ ಅನ್ನ ಪಕ್ಕಕ್ಕೆ ಇಟ್ಟಿರುವುದಾಗಿ ತಿಳಿಸಿದ್ದಾರೆ. ನಂತರ ವಿಡಿಯೋ ಕಾಲ್ ಮಾಡಿದ್ದ ನಂಬರ್ ಅನ್ನ ತಿಪ್ಪಾರೆಡ್ಡಿ ಅವರು ಬ್ಲಾಕ್ ಮಾಡಿದ್ದಾಗಿ ತಿಳಿಸಿದ್ದಾರೆ. ಈ ಕುರಿತು ಶಾಸಕ ತಿಪ್ಪಾರೆಡ್ಡಿ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


