ಪಾವಗಡ : ತಾಲೂಕಿನ ಯರಪಾಳ್ಯ ಗ್ರಾಮದಲ್ಲಿ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರವನ್ನು ಕಾಲೇಜಿನ ಘಟಕ 1 ಮತ್ತು 4 ರಿಂದ ಆಯೋಜಿಸಲಾಗಿತ್ತು,
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ವೆಂಕಟರಮಣಪ್ಪ, ವಿದ್ಯಾರ್ಥಿಗಳು ಇಂತಹ ಶಿಬಿರದಲ್ಲಿ ಪಾಲ್ಗೊಳ್ಳಬೇಕು, ಜೊತೆಗೆ ಗ್ರಾಮೀಣ ಭಾಗದಲ್ಲಿ ಜನರು ಯಾವ ರೀತಿ ಇರುತ್ತಾರೆ ಮತ್ತು ಯಾವ ರೀತಿ ಜೀವನವನ್ನು ನಡೆಸುತ್ತಾರೆ ಎನ್ನುವುದನ್ನು ಅವಲೋಕಿಸಿಕೊಂಡು ತಮ್ಮ ಜೀವನದಲ್ಲಿ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್. ಶ್ರೀಧರ್ ಅವರು ಮಾತನಾಡಿ, ಕಾಲೇಜಿನಲ್ಲಿ ಕಲಿಯುವಂತಹ ಶಿಕ್ಷಣದ ಜೊತೆಗೆ ಇಂತಹ ವಿಶೇಷ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಲ್ಲೂ ಸಹ ಭಾಗವಹಿಸಿ ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡುವುದರ ಜೊತೆಗೆ ಸಮಾಜದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪರಶುರಾಮಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಧನಂಜಯ ಎಂ.ಬಿ., ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಆನಂದ್ ಪಿ., ಸದಸ್ಯರಾದ ರಾಮಾಂಜಿ ವಿ., ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕಿ ನಸೀಮ ತಾಜ್, ಕಾಲೇಜಿನ ಉಪನ್ಯಾಸಕರಾದ ವೆಂಕಟರಮಣಪ್ಪ, ಅಶ್ವತಪ್ಪ, ಮಲ್ಲಯ್ಯ, ರವರು ಇದೆ ವೇಳೆ ಮಾತನಾಡಿದರು
ಇನ್ನು ಈ ಸಂದರ್ಭದಲ್ಲಿ ಇತಿಹಾಸ ವಿಭಾಗದ ಪ್ರೋ ಪಿ ಲಿಂಗರಾಜು, ಡಾ.ಸಿದ್ದರಾಮು, ಸತೀಶ್ ಕುಮಾರ್, ರವಿಕುಮಾರ್, ಶಶಿಕುಮಾರ್, ರಾಘವೇಂದ್ರ, ಪ್ರಹ್ಲಾದ್, ಕಿಟ್ಟಪ್ಪ, ರಾಮಾಂಜನಿ, ಪ್ರಸನ್ನ ಕುಮಾರ್, ಗ್ರಾಪಂ ಸದಸ್ಯರಾದ ರಾಮಾಂಜಿ, ಸೇರಿದಂತೆ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA