ಬೆಳಗಾವಿ: ಕೆಲಸಕ್ಕೆ ಹೋಗುವಾಗ ಮನರೇಗಾ ದಿನಗೂಲಿ ಕಾರ್ಮಿಕರ ಟೆಂಪೋ(ಬಸ್) ಪಲ್ಟಿಯಾಗಿ 35 ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಹಿಡಕಲ್ ಡ್ಯಾಂ ವ್ಯಾಪ್ತಿಯ ಹೊಸೂರ ಕ್ರಾಸ್ ಬಳಿ ನಡೆದಿದೆ.
ಗಾಯಾಳುಗಳನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಯಮಕನಮರಡಿ ಕ್ಷೇತ್ರದ ಹಿಡಕಲ್ ಡ್ಯಾಂ ವ್ಯಾಪ್ತಿಯ ಕಾಮಗಾರಿಗೆ ಮನರೇಗಾ ಕಾರ್ಮಿಕರು ಟೆಂಪೋನಲ್ಲಿ ಹೋಗುವಾಗ ಬುಲೆಟ್ ಗೆ ಡಿಕ್ಕಿ ಹೊಡೆದ ಪರಿಣಾಮ 35 ಕ್ಕೂ ಅಧಿಕ ಜನ ಕಾರ್ಮಿಕರು ಗಾಯಗೊಂಡ ಘಟನೆ ನಡೆದಿದೆ.
ನಾಲ್ಕೈದು ಜನರ ಕೈ– ಕಾಲು ತೀವ್ರ ಹೊಡೆತ ಬಿದ್ದಿದೆ ಎನ್ನಲಾಗಿದೆ. 29 ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೆ ಓರ್ವ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4