ಬೆಂಗಳೂರು: 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಮೊಬೈಲ್ ಗೀಳಿನಿಂದಾಗಿ ಬಾಲಕ ಸಾವಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ತನ್ನ 9 ವರ್ಷದ ತಂಗಿಯ ಎದುರೇ ಬಾಲಕ ನೇಣು ಬಿಗಿದುಕೊಂಡಿದ್ದಾನೆ. ಆಕೆ ಅಣ್ಣ ಏನು ಮಾಡುತ್ತಿದ್ದಾನೆ ಎನ್ನುವುದು ತಿಳಿಯದೇ ನೋಡುತ್ತಾ ನಿಂತಿದ್ದಳು ಎನ್ನಲಾಗಿದೆ.
ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಆತನ ತಾಯಿ ಬಂದಿದ್ದರು. ತಕ್ಷಣವೇ ಬಾಲಕನನ್ನು ನೆರೆಹೊರೆಯವರ ಸಹಕಾರದಿಂದ ಆಸ್ಪತ್ರೆಗೆ ಕರೆದೊಯ್ಯಲಾಯ್ತು, ಆದರೆ ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4