ಉತ್ತರ ಪ್ರದೇಶ : ವಾಹನ ಚಲಾಯಿಸುವ ವೇಳೆ ಮೊಬೈಲ್ ಬಳಸದಂತೆ ಎಷ್ಟೇ ಜಾಗೃತಿ ಮೂಡಿಸಿದವರು ಜನರು ತಿಳಿದುಕೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಪ್ರತಿದಿನ ಅನಾಹುತಗಳು ಘಟಿಸುತ್ತಲೇ ಇವೆ. ಇದೀಗ ಬೈಕ್ ಓಡಿಸುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್ ಆಗಿ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕಾನ್ಸುರದಲ್ಲಿ ಮಹಿಳೆ ಹೆಲೈಟ್ ಧರಿಸದೆ ಸ್ಕೂಟರ್ ಸವಾರಿ ಮಾಡುತ್ತಿದ್ದಳು. ಈ ವೇಳೆ ಇದ್ದಕ್ಕಿದ್ದಂತೆಯೇ ಮೊಬೈಲ್ ಬ್ಲಾಸ್ಟ್ ಆಗಿದೆ. ಮೊಬೈಲ್ ಬ್ಲಾಸ್ಟ್ ಆಗುತ್ತಿದ್ದಂತೆಯೇ ಮಹಿಳೆಯ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಅವಳನ್ನು ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ.
ಸಾವನ್ನಪ್ಪಿದ ಮಹಿಳೆಯನ್ನು ಪೂಜಾ(28) ಎಂದು ಗುರುತಿಸಲಾಗಿದೆ. ನೆಹ್ರರಿಯಾ ಗ್ರಾಮದ ಫರೂಖಾಬಾದ್ ಜಿಲ್ಲೆಯವಳಾಗಿರುವ ಪೂಜಾ ರೈಲು ನಿಲ್ದಾಣಕ್ಕೆ ಸ್ಕೂಟರ್ ನಲ್ಲಿ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296