nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    ಪಾವಗಡ July 4, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    By adminJuly 4, 2026No Comments1 Min Read
    Mock Election.jpg

    ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock Election) ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ ಎಂದು ವಿ.ಎಸ್. ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಶಂಕರ್ ತಿಳಿಸಿದರು.

    ಪಟ್ಟಣದ ವಿ.ಎಸ್. ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಅಣುಕು ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಲಾ ಹಂತದಲ್ಲೇ ಚುನಾವಣಾ ಪ್ರಕ್ರಿಯೆಯನ್ನು ಅನುಭವಿಸುವ ಅವಕಾಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.

    ಈ ಕಾರ್ಯಕ್ರಮದಲ್ಲಿ ನೈಜ ಚುನಾವಣೆಯ ಮಾದರಿಯಲ್ಲೇ ಎಲ್ಲಾ ಹಂತಗಳನ್ನು ಅತ್ಯಂತ ಶಿಸ್ತುಬದ್ಧವಾಗಿ ಅನುಸರಿಸಲಾಯಿತು. ಆಸಕ್ತ ವಿದ್ಯಾರ್ಥಿಗಳು ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿ, ಬಳಿಕ ತಮ್ಮ ಗುರಿ ಹಾಗೂ ಉದ್ದೇಶಗಳನ್ನು ಸಹಪಾಠಿಗಳಿಗೆ ತಿಳಿಸುತ್ತಾ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.

    ಚುನಾವಣೆಯ ದಿನದಂದು ಶಾಲೆಯಲ್ಲಿ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಬ್ಯಾಲೆಟ್ ಪೇಪರ್ ಮೂಲಕ ಅತ್ಯುತ್ಸಾಹದಿಂದ ಮತ ಚಲಾಯಿಸಿದರು. ನೈಜ ಚುನಾವಣೆಯ ಅನುಭವವನ್ನು ಕಟ್ಟಿಕೊಡುವ ಉದ್ದೇಶದಿಂದ ಮತ ಚಲಾಯಿಸಿದ ಪ್ರತಿಯೊಬ್ಬ ವಿದ್ಯಾರ್ಥಿಯ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಲಾಯಿತು.

    ಇಡೀ ಚುನಾವಣಾ ಪ್ರಕ್ರಿಯೆಯಲ್ಲಿ ಪೋಲಿಂಗ್ ಅಧಿಕಾರಿ, ಪ್ರಿಸೈಡಿಂಗ್ ಅಧಿಕಾರಿ, ರಿಟರ್ನಿಂಗ್ ಅಧಿಕಾರಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಮಹತ್ವದ ಜವಾಬ್ದಾರಿಗಳನ್ನು ಶಾಲೆಯ ಶಿಕ್ಷಕರೇ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

    ಈ ವಿಶೇಷ ಸಂದರ್ಭದಲ್ಲಿ ವಿ.ಎಸ್. ವಿದ್ಯಾ ಸಂಸ್ಥೆಯ ಖಜಾಂಚಿ ದೀಪಿಕಾ ಎಸ್., ಮುಖ್ಯ ಶಿಕ್ಷಕ ರಮೇಶ್, ಸಹ ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock…

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.