ತುಮಕೂರು: ಕೊವಿಡ್ ಹಾಗೂ ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ವಿಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ತುಮಕೂರು ಶನಿವಾರ ಮಧ್ಯಾಹ್ನದ ಸುಮಾರಿಗೆ ಸಂಪೂರ್ಣ ಸ್ಥಬ್ದವಾಗಿದ್ದು, ನಗರವೇ ಸಂಪೂರ್ಣ ಖಾಲಿ ಖಾಲಿಯಾಗಿತ್ತು.
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕೆಲವೇ ಕೆಲವು ಮಂದಿ ದೂರದ ಊರುಗಳಿಂದ ಬಂದು ಬೇರೆಡೆಗೆ ಪ್ರಯಾಣಿಸಲು ಬಸ್ಸಿಗಾಗಿ ಕಾಯುತ್ತಾ ಕುಳಿತಿರುವುದು ಕಂಡು ಬಂತು.
ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂ.ಜಿ. ರಸ್ತೆಯಲ್ಲಿ ಸದಾ ಜನ ಜಂಗುಳಿಯಿಂದ ಇರುತ್ತಿದ್ದ ಎಂ.ಜಿ.ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ದೃಶ್ಯ ಕಂಡುಬಂತು.
ತುಮಕೂರು ನಗರಕ್ಕೆ ಬರುವ ಹಾಗೂ ತುಮಕೂರು ನಗರದಿಂದ ಹೊರ ಹೋಗುವ ಜನಸಾಮಾನ್ಯರನ್ನು ಪೋಲಿಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವುದು ಕಂಡುಬಂತು.
ತುಮಕೂರಿನ ಮಾರುಕಟ್ಟೆಯಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ಗ್ರಾಹಕರಿಲ್ಲದೆ ವರ್ತಕರು ಗ್ರಾಹಕರಿಗಾಗಿ ಕಾದು ಕುಳಿತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಮಾರುಕಟ್ಟೆಯಲ್ಲಿ ಜನರಿಲ್ಲದೆ ಖಾಲಿ ಖಾಲಿಯಾಗಿ ಕಾಣತೊಡಗಿತು.
ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy