ಪ್ರಧಾನಿಯಾಗಿ ನರೇಂದ್ರ ಮೋದಿ ತಮ್ಮ ಕರ್ತವ್ಯ ಮರೆತಿದ್ದಾರೆ. ಹಾಗಾಗಿ ಅವರು ಎಲ್ಲಾ ಚುನಾವಣೆಯಲ್ಲೂ ಭಾಷಣ ಮಾಡಲು ಬರುತ್ತಾರೆ. ಅವರೇನು 100 ತಲೆಯ ರಾವಣನಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಈಗ ವಿವಾದಕ್ಕೆ ತಿರುಗಿದೆ.
ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ತಮ್ಮ ಕರ್ತವ್ಯ ಮರೆತಿದ್ದಾರೆ. ಹಾಗಾಗಿ ಅವರು ಸ್ಥಳೀಯ, ಕಾರ್ಪೊರೇಷನ್, ಎಂಎಲ್ ಎ ಸೇರಿದಂತೆ ಯಾವುದೇ ಚುನಾವಣೆ ಇದ್ದರೂ ಹೋಗಿ ನನ್ನ ಮುಖ ನೋಡಿ ಮತ ಹಾಕಿ ಅಂತಾರೆ. ಎಷ್ಟು ದಿನ ಅಂತ ಅವರ ಮುಖ ನೋಡೋದು? ಅವರೇನು 100 ತಲೆಯ ರಾವಣನಾ ಎಂದು ಪ್ರಶ್ನಿಸಿದ್ಧಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಗುಜರಾತ್ ಪುತ್ರನಿಗೆ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದೆ.
ಆದರೆ ಕಾಂಗ್ರೆಸ್ ಗುಜರಾತ್ ಚುನಾವಣೆಯಲ್ಲೂ ಅಭಿವೃದ್ಧಿ ವಿಷಯ ಮಾತನಾಡದೇ ಮೋದಿ ಹೆಸರು ಹೇಳಿಕೊಂಡು ಮತ ಕೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


