ಬೆಂಗಳೂರು: ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸಾಗುವುದರಲ್ಲಿ ಅನುಮಾನವೇ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿಮಾತನಾಡಿದ ಅವರು ನಾಡಗೀತೆ ಉಲ್ಲೇಖಿಸಿ ಮಾತನಾಡಿ, ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೇ ಎಂಬ ವಾಕ್ಯದಲ್ಲಿ ನಾವು ನಂಬಿಕೆ ಹೊಂದಿದ್ದೇವೆ ಎಂದರು.
ಪ್ರಧಾನಿಯವರ ನವಭಾರತದ ಕಲ್ಪನೆಗೆ ನವ ಕರ್ನಾಟಕ ನಿರ್ಮಾಣದ ಮೂಲಕ ನಾವು ಕೈ ಜೋಡಿಸುತ್ತಿದ್ದೇವೆ. ಮೋದಿಯವರ ಆಶೀರ್ವಾದ ಇದ್ದರೆ ನವ ಕರ್ನಾಟಕದ ಕನಸು ಈಡೇರುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಧಾನಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


