ಧರ್ಮಸ್ಥಳ: ಮೋದಿ ಸರ್ಕಾರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಇದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸೋಮವಾರ ಹೇಳಿದರು.
ಧರ್ಮಸ್ಥಳ ಚಲೋʼ ಹಾಗೂ ಸಮಾಜ ಜಾಗೃತಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಕೇವಲ ಒಂದೇ ಒಂದು ವರ್ಗದವರು ಬರುವುದಿಲ್ಲ. ಎಲ್ಲಾ ವರ್ಗದವರೂ ಬರುತ್ತಾರೆ. ಅದರಲ್ಲೂ ಅತ್ಯಂತ ಹಿಂದುಳಿದ ವರ್ಗದವರು ಬಂದು ಅಣ್ಣಪ್ಪ ಸ್ವಾಮಿಗೆ ನಮಸ್ಕಾರ ಹಾಕಿ, ಮಂಜುನಾಥೇಶ್ವರನಿಗೆ ಮುಡಿ ಕೊಟ್ಟು ಹೋಗುವ ಸಂಪ್ರದಾಯ ತಲತಲಾಂತರದಿಂದ ಬೆಳೆದು ಬಂದಿದೆ. ಆದರೆ, ಇಂದು ಬುರುಡೆ ಪ್ರಕರಣದ ನೆಪದಲ್ಲಿ ಹಿಂದೂ ಸಮಾಜವನ್ನೇ ಒಡೆಯುವ ಷಡ್ಯಂತರ ಧರ್ಮಸ್ಥಳ ಪ್ರಕರಣದಲ್ಲಿ ಅಡಗಿದೆ ಎಂದು ಹಿಂದೂಗಳನ್ನು ಎಚ್ಚರಿಸಿದರು.
ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಪ್ರಭಾವ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದೂಗಳಲ್ಲಿ ಕ್ಷೇತ್ರದ ಮೇಲೆ ಇರುವ ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆ ಕಡಿಮೆ ಮಾಡುವ ಸಂಚು ಇದಾಗಿದೆ. ಅಲ್ಲದೇ, ಹಿಂದೂ ಸಮಾಜವನ್ನು ಒಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು ಸಚಿವ ಜೋಶಿ ಹರಿಹಾಯ್ದರು.
ಧರ್ಮಸ್ಥಳ ಪ್ರಹಸನದಲ್ಲಿ ಸರ್ಕಾರ ಅದ್ಯಾವ ಕಾರಣಕ್ಕೆ ಎಸ್‌ಐಟಿ ರಚನೆ ಮಾಡಿತು? ಎಂದು ಪ್ರಶ್ನಿಸಿದ ಸಚಿವರು, ಮೊದಲು ಬುರುಡೆ ತಂದವನನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕಿತ್ತು. ಎಲ್ಲಿಂದ ಬುರುಡೆ ತಂದ? ಎಂಬ ಬಗ್ಗೆ ಬಾಯಿ ಬಿಡಿಸಿದ್ದರೆ ಅಲ್ಲೇ ಸತ್ಯದ ದರ್ಶನವಾಗುತ್ತಿತ್ತಲ್ಲ? ಇಷ್ಟೆಲ್ಲಾ ಹೈಡ್ರಾಮಾ ಏಕೆ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC