ಬೆಳಗಾವಿ: ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ, ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ ಪ್ರಧಾನಿ ಸ್ಥಾನ ಬದಲಾವಣೆ ಸಾಧ್ಯತೆ ಇರುವುದಾಗಿ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದರು.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಂಕಟ ಇದೆ. ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4