ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಮುಂದಿನ ವರ್ಷದಿಂದ ಅವರು ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರ ‘ಅನ್ ಲೈಕ್ಲಿ ಪ್ಯಾರಡೈಸ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಅವರ ರಾಜಕೀಯ ವಿಶ್ಲೇಷಣೆಯ ಪ್ರಕಾರ, ಇನ್ನು ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲಿದ್ದಾರೆ.
ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಪ್ರಾಬಲ್ಯ ಕುಸಿಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಟೀಕೆ ಮಾಡಿದವರನ್ನು ಜೈಲಿಗೆ ಕಳುಹಿಸಲಾಗುತ್ತಿತ್ತು, ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಚುನಾವಣೆಗಳಲ್ಲಿ ಗೆಲ್ಲುತ್ತಿರುವುದಕ್ಕೆ ಚುನಾವಣಾ ಆಯೋಗವೇ ಕಾರಣ ಎಂದು ಆರೋಪಿಸಿದ ಕೇಜ್ರಿವಾಲ್, ಮುಂಬರುವ ದಿನಗಳಲ್ಲಿ ಬಂಗಾಳ ಮತ್ತು ಉತ್ತರ ಪ್ರದೇಶದ (2027) ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


