ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ನಾನು ಹೇಳಿರುವ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಬದಲಾಗಿ ಅವರು ಸನಾತನ ಧರ್ಮದ ವಿಚಾರವಾಗಿ ಮಾತನಾಡಿದ್ದಾರೆ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ ಅದಕ್ಕೆಲ್ಲ ಉತ್ತರ ಕೊಡಲ್ಲ. ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದರು.
ಧರ್ಮದ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ ಅಷ್ಟೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೆ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡಲ್ಲ. ಮೋದಿ ಅವರು ನಾನು ಹೇಳಿರುವ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಸನಾತನ ಧರ್ಮದ ವಿಚಾರವಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯವರು ಹೋರಾಟ ಮಾಡಲಿ. ನಾವು ಉತ್ತರ ಕೊಡುತ್ತೇವೆ. ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಉತ್ತರ ಕೊಡುತ್ತಾರೆ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನು ಬೇರೆ ಕಾನೂನು ಇದೆಯಾ ಎಂದು ಪ್ರಶ್ನಿಸಿದರು.


