ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಮೋಹನ್ ಅವರ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಣ್ಣೀರು ಮಿಡಿದಿದ್ದಾರೆ. ನೂರಾರು ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರ ಮಾಡಿರುವ ಮೋಹನ್ ಅವರು ಹಾಸ್ಯ ಪಾತ್ರದಲ್ಲಿ ಹೆಚ್ಚು ಮಿಂಚಿದ್ದರು.
ಕೆಜಿಎಫ್ ಚಿತ್ರದಲ್ಲಿ ಕೂಡ ಪಾತ್ರ ಮಾಡಿದ್ದ ಮೋಹನ್ ಅವರು ಜನರ ಮನಸ್ಸನ್ನು ಗೆದ್ದಿದ್ದರು. ನಿನ್ನೆ ರಾತ್ರಿ ಮೋಹನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರನ್ನು ತಕ್ಷಣವೇ ಚಿಕ್ಕಬಾಣಾವರ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


