nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿ ಆಸೆಗೆ ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಮೊಮ್ಮಗನಿಗೆ ಶಾಕ್ ನೀಡಿದ ಅಧಿಕಾರಿಗಳು
    ಕೊರಟಗೆರೆ January 31, 2023

    ಆಸ್ತಿ ಆಸೆಗೆ ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಮೊಮ್ಮಗನಿಗೆ ಶಾಕ್ ನೀಡಿದ ಅಧಿಕಾರಿಗಳು

    By adminJanuary 31, 2023No Comments2 Mins Read
    koratagere

    ಕೊರಟಗೆರೆ : ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಎನ್ನುವ ವೃದ್ದೆಯನ್ನು ತನ್ನ ಮೊಮ್ಮಗನೇ ಮನೆಯಿಂದ ಹೊರ ಹಾಕಿದ್ದ ದಾರುಣ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ  ಮಧುಗಿರಿ ಉಪ ವಿಭಾಗಾಧಿಕಾರಿಗಳ ಆದೇಶದಂತೆ ಕೊರಟಗೆರೆ ತಹಶೀಲ್ದಾರ್ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಿರಿಯ ನಾಗರಿಕರ ಹಕ್ಕು ಕಾಯ್ದೆ ಅಡಿಯಲ್ಲಿ ಸುಮಾರು 80 ವಯಸ್ಸಿನ ಕಾವಲಮ್ಮ ವೃದ್ದೆಗೆ ತಾನು ವಾಸಿಸುತ್ತಿದ್ದ ಮನೆಯನ್ನು ಹಿಂದಿರುಗಿಸಿ ಕೊಟ್ಟಿರುವ ಘಟನೆ ನಡೆದಿದೆ.

    ಘಟನೆಯ ಬಗ್ಗೆ ತಹಶೀಲ್ದಾರ್ ನರಸಿಂಹಮೂರ್ತಿ ಮಾತನಾಡಿ, ಉಪವಿಭಾಗಾಧಿಕಾರಿಗಳ ಆದೇಶದಂತೆ ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಲೇಟ್ ರಾಮಯ್ಯ ಎನ್ನುವವರನ್ನು ಮಾರುತಿ ಎನ್ನುವವರು ಬಲವಂತದಿಂದ ಮನೆಯಿಂದ ಹೊರ ಹಾಕಿದ್ದ ದೂರಿನ ಅನ್ವಯ ಮೇಲಾಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಭೇಟಿ ನೀಡಿ   ವಯೋವೃದ್ದೆಯಾದ ಕಾವಲಮ್ಮನಿಗೆ ಇವರ ಮುಂದಿನ ಜೀವನವನ್ನು ಮನದಲ್ಲಿಟ್ಟುಕೊಂಡು ಕಾವಲಮ್ಮನಿಗೆ ಮನೆಯನ್ನು ಅಧಿಕಾರಿಗಳ ಸಮಕ್ಷಮದಲ್ಲಿ ಹಿಂತಿರುಗಿಸಲಾಯಿತು. ವಯೋವೃದ್ದೆಯಾದ ಕಾವಲಮ್ಮ ಇನ್ನು ಮುಂದೆ ಸಂತೋಷದಿಂದ ತನ್ನ ಮನೆಯಲ್ಲಿ ವಾಸಿಸಬಹುದು ಎಂದು ತಿಳಿಸಿದರು.


    Provided by
    Provided by

    koratagere

    ತನ್ನ ಮನೆಗೆ ಮರಳಿ ಬಂದ ಅಜ್ಜಿ ಕಾವಲಮ್ಮ ಮಾತನಾಡಿ.. ಯಾವಾಗಲೂ ತನ್ನ ಮೊಮ್ಮಗ  ಮಾರುತಿ ನನಗೆ ಬಹಳ ತೊಂದರೆ ಕೊಟ್ಟು ಸದಾ ಹಿಂಸೆ ಕೊಡುತ್ತಿದ್ದ ನನ್ನ ಗಂಡ ನಾನು ಕಷ್ಟಪಟ್ಟು ಕೂಲಿ ನಾಲಿ ಮಾಡಿ ಕಟ್ಟಿಕೊಡ ಮನೆಯಿಂದ ನನ್ನನ್ನೇ ಹೊರಹಾಕಿದ ಎಷ್ಟು ಬಾರಿ ಹೇಳಿದರೂ ಕೇಳುತ್ತಿರಲಿಲ್ಲ. ಇದೀಗ ಅಧಿಕಾರಿಗಳು ಬಂದು ನನ್ನ ಮನೆಯನ್ನು ನನಗೆ ಹಿಂತಿರುಗಿಸಿ ಕೊಟ್ಟಿದ್ದಾರೆ ತುಂಬಾ ಸಂತೋಷವಾಗಿದೆ. ನನ್ನ ಮುಂದಿನ ಜೀವನವನ್ನು ಸಂತೋಷದಿಂದ ನನ್ನ ಮನೆಯಲ್ಲಿ ನಡೆಸುತ್ತೇನೆ ಎಲ್ಲಾ ಅಧಿಕಾರಿಗಳಿಗೂ ಧನ್ಯವಾದ ಎಂದು ತಿಳಿಸಿದರು.

    ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಪಾಪಿ ಮೊಮ್ಮಗ:

    ತನ್ನ ಪೋಕರಿತನಕ್ಕೆ ಪುಂಡಾಟಿಕೆಗೆ  ಅಜ್ಜಿ ಪ್ರತಿನಿತ್ಯ ಮೊಮ್ಮಗನಿಗೆ ಅಡ್ಡ ಬರುತ್ತಿದ್ದಳು ಎನ್ನುವ ಕಾರಣಕ್ಕೆ  ಅಜ್ಜಿಯನ್ನೆ ಮನೆಯಿಂದ ಹೊರ ಹಾಕಿದರೆ ಮೊಮ್ಮಗ ತಾನು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದ. ಆದರೆ ಇಂತಹ ಪುಂಡರಿಗೆ ಕಾನೂನು ಎನು ಎನ್ನುವುದು ತಿಳಿದಿರುವುದಿಲ್ಲ.

    ಆದರೆ ಇಂದು ಆತನಿಗೆ ಕಾನೂನು ತಿಳಿಯುವಂತೆ ಮಾಡಿದ ಕೊರಟಗೆರೆಯ ಅಧಿಕಾರಿಗಳು ವಯೋವೃದ್ಧರ  ಕಾನೂನಿನ ಮನೆ ಕಳೆದುಕೊಂಡ ಅಜ್ಜಿಗೆ ಮರಳಿ ದೊರಕಿಸಿಕೊಟ್ಟಿದ್ದಾರೆ. ವಯೋವೃದ್ಧಿಗೆ ನ್ಯಾಯ ಸಿಕ್ಕಿರುವ  ಸಂತೋಷವನ್ನು ತಹಶೀಲ್ದಾರ್  ನರಸಿಂಹಮೂರ್ತಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಎಎಸ್ ಐ  ಧರ್ಮೇಗೌಡ ಸೇರಿದಂತೆ ಇತರ ಅಧಿಕಾರಿಗಳು ಮಾಧ್ಯಮದವರೊಂದಿಗೆ ಹಂಚಿಕೊಂಡರು.

    ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳಾದ  ಎ ಎಸ್ ಐ ಧರ್ಮೆಗೌಡ ಸಿಬ್ಬಂದಿ ಮಲ್ಲೇಶ್  ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಾದ ಆರ್ ಐ ಪ್ರತಾಪ್, ಪವನ್ ಕುಮಾರ್, ಬಸವರಾಜ್, ರಾಘವೇಂದ್ರ, ದೊಡ್ಡೇಗೌಡ  ಸೇರಿದಂತೆ  ಸ್ಥಳೀಯ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.