ಭೋಪಾಲ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ವೈರಲ್ ಆಗಿದ್ದ 16 ವರ್ಷದ ಮೊನಾಲಿಸಾಗೆ ಸಿನಿಮಾ ಕ್ಷೇತ್ರದಲ್ಲಿ ಅವಕಾಶ ದೊರಕಿದೆ.
ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಮತ್ತು ಅವರ ತಂಡ ಬುಧವಾರ ಮಧ್ಯಪ್ರದೇಶದ ಮಹೇಶ್ವರದಲ್ಲಿರುವ ಮೊನಾಲಿಸಾ ಅಲಿಯಾಸ್ ಮೋನಿ ಭೋನ್ಸಾಲೆ ಅವರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ತಮ್ಮ ಮುಂಬರುವ ‘ದಿ ಡೈರಿ ಆಫ್ ಮಣಿಪುರ’ ಚಿತ್ರಕ್ಕಾಗಿ ಮೊನಾಲಿಸಾ ಅವರನ್ನು ಆಯ್ಕೆ ಮಾಡಿದ್ದಾರೆ.
ಮೊನಾಲಿಸಾ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುವ ಪ್ರಸ್ತಾಪವನ್ನು ಆಕೆಯ ಕುಟುಂಬ ಒಪ್ಪಿಕೊಂಡಿದೆ ಎಂದು ಸನೋಜ್ ಮಿಶ್ರಾ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4