ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ನಾಯಕ ಮತ್ತೊಬ್ಬರಿಲ್ಲ. ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕಾರ್ಯಕರ್ತರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, “ಸಹಕಾರ, ಒಗ್ಗಟ್ಟಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ. ಮೋದಿ ಹೆಸರು ಮಾತ್ರವೇ ಟ್ರಂಪ್ ಕಾರ್ಡ್ ಆಗಿದೆ” ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್ ಡಿಡಿ, ಕಾಂಗ್ರೆಸ್ ನವರಿಂದ ಹೊರ ರಾಜ್ಯಕ್ಕೂ ಹಣ ಸರಬರಾಜು ಆಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296