ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ದಲಿತರಿಗೆ ಮೀಸಲಾಗಿಡುವ ಎಸ್.ಸಿ.ಪಿ., ಟಿ.ಎಸ್.ಪಿ.ಗೆ ಸೇರಿದ ಒಂದು ರೂಪಾಯಿ ಹಣವನ್ನು ಕೂಡ ಗ್ಯಾರಂಟಿಗಳಿಗೆ ಬಳಸಬಾರದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಮೀಸಲಿಟ್ಟ ಎಸ್.ಸಿ.ಪಿ., ಟಿ.ಎಸ್.ಪಿ. ಹಣದಲ್ಲಿ ಮೊದಲು ಅಂಬೇಡ್ಕರ್ ನಿಗಮ, ಆದಿ ಜಾಂಬವ ನಿಗಮ, ಬೋವಿ, ವಾಲ್ಮೀಕಿ ನಿಗಮ ಸೇರಿ ವಿವಿಧ ನಿಗಮಗಳ ಮೂಲಕ ಜಮೀನು ಇಲ್ಲದವರಿಗೆ ಜಮೀನುಗಳನ್ನು ಕೊಡಲಾಗುತ್ತಿತ್ತು. ಆದರೆ, ಭೂಮಿ ಕೊಟ್ಟಿಲ್ಲ; 39 ಸಾವಿರ ಕೋಟಿ ಮೀಸಲಿಟ್ಟರೂ ಎಲ್ಲ ನಿಗಮಗಳಿಗೆ ಸೇರಿ 500 ಕೋಟಿ ಕೊಡಲು ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.
ದಲಿತರಿಗೆ ಇಟ್ಟ ಹಣವನ್ನು ಅವರಿಗಲ್ಲದೇ ಇನ್ನೊಬ್ಬರಿಗೆ ಖರ್ಚು ಮಾಡುವುದಿಲ್ಲ ಎನ್ನುತ್ತಾರೆ. ಆದರೆ, ಗ್ಯಾರಂಟಿಗಳಿಗೆ ಬಳಸುವುದು ತಪ್ಪು. ಸಾರ್ವಜನಿಕವಾಗಿ ಕೊಡುವ ಗ್ಯಾರಂಟಿಗೆ ದಲಿತರಿಗೆ ಮೀಸಲಿಟ್ಟ ಹಣ ಬಳಸುವುದು ತಪ್ಪು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4