ತುಮಕೂರು: ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದ ನಾಮದ ಚಿಲುಮೆ ಬಳಿ ಸಾಕಷ್ಟು ಕೋತಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ನಾಮದ ಚಿಲುಮೆ ಸಮೀಪ ಕೋತಿಗಳು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ತಕ್ಷಣವೇ ತನಿಖೆ ಆರಂಭಿಸಿದ್ದಾರೆ.
ಸಂಜೆ 5 ಗಂಟೆಯಿಂದ ತಡರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇದು ಸಾಮಾನ್ಯ ಮಂಗಗಳು ಹಾಗೂ ಎರಡು ಹನುಮಾನ್ ಲಂಗೂರ್‌ಗಳು ಸೇರಿದಂತೆ ಒಟ್ಟು ಏಳು ಕೋತಿಗಳ ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ.
ಈ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಕೋತಿಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಮುಂಜಾನೆ ಮತ್ತೆ ಶೋಧ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಕೋತಿಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ವಿಷ ಸೇವನೆ ಮಾಡಿರುವ ಸಾಧ್ಯತೆ ಅಥವಾ ಮಂಗನ ಕಾಯಿಲೆ (Monkey Disease) ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


