ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣದ ಹೊರವಲಯದಲ್ಲಿರುವ ಪಾರ್ಕ್ವೊಂದರಲ್ಲಿ ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್ ಗಿರಿ ತೋರಿದ ಘಟನೆ ನಡೆದಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಕೆಲ ಯುವಕರ ಗ್ಯಾಂಗ್ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಅದೇ ಧರ್ಮದ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296