nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಂದಿನ ವರ್ಷ ಚಿಕ್ಕನಾಯಕನಹಳ್ಳಿ, ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು | ನಾಲಾ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಸೂಚನೆ

    November 6, 2026

    ಬೆಂಡೋಣೆಯಲ್ಲಿ ಸಂಭ್ರಮದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳೂ ಅಗತ್ಯ: ಸಿಆರ್‌ ಪಿ ರಂಗರಾಜು

    November 6, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026
    Facebook Twitter Instagram
    ಟ್ರೆಂಡಿಂಗ್
    • ಮುಂದಿನ ವರ್ಷ ಚಿಕ್ಕನಾಯಕನಹಳ್ಳಿ, ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು | ನಾಲಾ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಸೂಚನೆ
    • ಬೆಂಡೋಣೆಯಲ್ಲಿ ಸಂಭ್ರಮದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳೂ ಅಗತ್ಯ: ಸಿಆರ್‌ ಪಿ ರಂಗರಾಜು
    •  ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!
    • ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ
    • ರಾವಣನಾಗಿ ಯಶ್ ಪರಕಾಯ ಪ್ರವೇಶ! ರಾವಣ ಪಾತ್ರ ಮಾಡಿದರೆ ಶಾಂತಿ ಹೋಮ ಮಾಡಿಸಬೇಕಾ?
    • ನವೆಂಬರ್ ಸಂಬಳದಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಖುಷಿ; ತುಟ್ಟಿಭತ್ಯೆ ಹೆಚ್ಚಳದ ಆದೇಶ ಪ್ರಕಟ
    • ಕರ್ನಾಟಕದಲ್ಲಿ ಹಲವು ಐಎಫ್‌ ಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?
    • ಅರಣ್ಯ ಇಲಾಖೆಯ ಮುಂದೆಯೇ ಮರಗಳ ಮಾರಣಹೋಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದಿಂದ ಪೊಲೀಸರಿಗೆ ಹೆಚ್ಚಿನ ಸವಲತ್ತು: ಪೊಲೀಸ್ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ ಭರವಸೆ
    ರಾಜ್ಯ ಸುದ್ದಿ February 1, 2025

    ಸರ್ಕಾರದಿಂದ ಪೊಲೀಸರಿಗೆ ಹೆಚ್ಚಿನ ಸವಲತ್ತು: ಪೊಲೀಸ್ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ ಭರವಸೆ

    By adminFebruary 1, 2025No Comments1 Min Read
    g parameshwar

    ಬೆಂಗಳೂರು: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆರು ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ಬೆಂಗಳೂರು ನಗರ ಪೊಲೀಸ್ ವತಿಯಿಂದ ಆಡುಗೋಡಿಯ ಸಿಎಆರ್ ಮೈದಾನದಲ್ಲಿ ನಡೆದ ಬೆಂಗಳೂರು ನಗರ ಪೊಲೀಸ್ “ವಾರ್ಷಿಕ ಕ್ರೀಡಾಕೂಟ 2024” ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

    ಈಗಾಗಲೇ ಮೂರು ಕೋಟಿ ರೂ.‌ ಅನುದಾನ ನೀಡಲಾಗಿದೆ. ಬಜೆಟ್‌ನಲ್ಲಿ ಇನ್ನುಳಿದ ಅನುದಾನವನ್ನು ನೀಡಲಾಗುವುದು. ಸರ್ಕಾರವು ಮುಂದಿನ ದಿನಗಳಲ್ಲಿ ಪೊಲೀಸರಿಗೆ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸುತ್ತದೆ ಎಂದು ಹೇಳಿದರು.

    ದೇಶದ ಬೇರೆ ಮಹಾನಗರ ಪೊಲೀಸರಿಗಿಂತ ಬೆಂಗಳೂರು ನಗರ ಪೊಲೀಸ್ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ.  ಕರ್ನಾಟಕ ಪೊಲೀಸರು ಇನ್ನು ಹೆಚ್ಚಿನ ರೀತಿಯಲ್ಲಿ ಸಮರ್ಥವಾಗಿ ಕೆಲಸ ಮಾಡಬೇಕಿದೆ ಎಂದು ನನಗೆ ಅನ್ನಿಸುತ್ತದೆ.

    ದಕ್ಷತೆ‌ ಮತ್ತು ಪ್ರಾಮಾಣಿಕತೆಯಲ್ಲಿ ಕರ್ನಾಟಕ‌ ಪೊಲೀಸ್ ಎರಡನೇ ಸ್ಥಾನದಲ್ಲಿದೆ‌ ಎಂಬುದನ್ನು ರಾಷ್ಟ್ರಮಟ್ಟದ ಜಾಗರಣಾ ಪತ್ರಿಕೆ ವರದಿ ಮಾಡಿದೆ. ಇದು ಸಂತೋಷ ತಂದಿದೆಯಾದರು ಕರ್ನಾಟಕ ಪೊಲೀಸ್ ದೇಶದಲ್ಲಿ ಮೊದಲ ಸ್ಥಾನದಲ್ಲಿರಬೇಕು ಎಂದ ಅವರು, ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ ಸಿಬ್ಬಂದಿಗಳನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರು.

    ಉತ್ತಮ ಆರೋಗ್ಯ ಮತ್ತು ದೈಹಿಕ ಸಾಮಾರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಮಾನಸಿಕವಾಗಿ ಏಕತೆಯ ಭಾವನೆ ಮೂಡಿಸುತ್ತದೆ. ಕರ್ತವ್ಯದಲ್ಲಿನ ಮಾನಸಿಕ ಒತ್ತಡಗಳನ್ನು ತಡೆಯುವ ಶಕ್ತಿ ಕ್ರೀಡೆಯಿಂದ ಬರುತ್ತದೆ. ಜೀವನದಲ್ಲಿ ಅನೇಕ‌ಸಲ ಸೋಲು, ಗೆಲುವುಗಳನ್ನು ಕಾಣುತ್ತೇವೆ. ಸೋಲನ್ನು ಸ್ವೀಕರಿಸುವ ಶಕ್ತಿ ಕ್ರೀಡೆಯಿಂದ ಬರುತ್ತದೆ.  ಸ್ವತಃ ಕ್ರೀಡಾಪಟುವಾಗಿ ಇಂತಹ ಅನುಭವ ಕಂಡಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ಗೃಹ ಸಚಿವರ ಶ್ರೀಮತಿ ಕನ್ನಿಕಾ ಪರಮೇಶ್ವರಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    ನವೆಂಬರ್ ಸಂಬಳದಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಖುಷಿ; ತುಟ್ಟಿಭತ್ಯೆ ಹೆಚ್ಚಳದ ಆದೇಶ ಪ್ರಕಟ

    November 6, 2026

    ಕರ್ನಾಟಕದಲ್ಲಿ ಹಲವು ಐಎಫ್‌ ಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?

    November 6, 2026

    Comments are closed.

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಮುಂದಿನ ವರ್ಷ ಚಿಕ್ಕನಾಯಕನಹಳ್ಳಿ, ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು | ನಾಲಾ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಸೂಚನೆ

    November 6, 2026

    ಚಿಕ್ಕನಾಯಕನಹಳ್ಳಿ : ಮುಂದಿನ ಬಾರಿ ಹೇಮಾವತಿ ಜಲಾಶಯದಿಂದ ನೀರು ಹರಿಸುವ ವೇಳೆಗೆ ದಬ್ಬೇಘಟ್ಟದಿಂದ ಚಿಕ್ಕನಾಯಕನಹಳ್ಳಿ ಹಾಗೂ ಕಂದಿಕೆರೆ ಭಾಗಕ್ಕೆ ನೀರು…

    ಬೆಂಡೋಣೆಯಲ್ಲಿ ಸಂಭ್ರಮದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳೂ ಅಗತ್ಯ: ಸಿಆರ್‌ ಪಿ ರಂಗರಾಜು

    November 6, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.