ಬೆಂಗಳೂರು: ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ.
ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ.
ಆಗಸ್ಟ್ 15ಕ್ಕೆ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


