ತುಮಕೂರು: ಜಾತ್ರಾ ಮಹೋತ್ಸವದಲ್ಲಿ ನೀಡಿದ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ.
ತೀವ್ರ ಸ್ವಸ್ಥಗೊಂಡ ಭಕ್ತರನ್ನು ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಮಳೆ ಕೂಡ ಹೆಚ್ಚಾಗಿದೆ, ಮಳೆ ನೀರಿನಿಂದನೋ ಅಥವಾ ಊಟದಿಂದನೋ ಕೆಲವರು ಅಸ್ವಸ್ಥರಾಗಿದ್ದಾರೆ ಎಂಬ ಮಾಹಿತಿ ಮೇಲ್ನೋಟಕ್ಕೆ ಲಭ್ಯವಾಗುತ್ತಿದೆ .
ಪೆದ್ದಣ್ಣ, ಲಕ್ಷ್ಮಮ್ಮ ಎನ್ನುವವರಿಗೆ ಗಂಭೀರವಾಗಿತ್ತು, ಈಗ ಚೇತರಿಕೆ ಆಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಅಸ್ವಸ್ಥಗೊಂಡಿರುವ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಜಾತ್ರಾ ಮಹೋತ್ಸವದ ವೇಳೆ ಸುಮಾರು 15ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು ಇನ್ನು ಕೆಲವರನ್ನು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA