ಆರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕಳೆದ 3 ತಿಂಗಳಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು.
ಕೊರಟಗೆರೆ ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗಿದ ಹಡಗು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆದ್ದರೆ ಅಭಿವೃದ್ಧಿ ತಾನಾಗಿಯೇ ಆಗಲಿದೆ ಎಂದು ತಿಳಿಸಿದರು.
ಕೊರಟಗೆರೆ ಮಂಡಲ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಹಳ ವರ್ಷದಿಂದ ಕೆಲಸ ಮಾಡಿದವರು ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ 200ಕ್ಕೂ ಕಾರ್ಯಕರ್ತರು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿದರು.
ಜೆಟ್ಟಿಅಗ್ರಹಾರ ಮಾಜಿ ಗ್ರಾ.ಪಂ. ಅಧ್ಯಕ್ಷ ನಂದೀಶ್ ಮಾತನಾಡಿ, 2013 ರಿಂದ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡು ಬಂದಿದ್ದೆವು. ಆದರೆ ಕಾಂಗ್ರೆಸ್ ನಡೆಗೆ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲ. ಅದಕ್ಕಾಗಿ ನಾವು ಬಿಜೆಪಿ ಪಕ್ಷಕ್ಕೆ ಸೇರಿ ಪಕ್ಷ ಕಟ್ಟುತ್ತೇವೆ ಎಂದರು.
ತುಂಬಾಡಿ ಬಿಜೆಪಿ ಮುಖಂಡೆ ರೇಣುಕಾಶ್ರೀ ಮಾತನಾಡಿ, ನಮ್ಮ ಸರ್ಕಾರವಿಲ್ಲ ವಿರೋಧ ಪಕ್ಷವಿದೆ ಎಂದು ಹೇಳುತ್ತಾ ಅಭಿವೃದ್ಧಿ ಕೆಲಸಗಳಾಗದೇ ಕೊರಟಗೆರೆ ಹಿಂದುಳಿದಿದೆ. ಕಾಂಗ್ರೆಸ್ ಸರ್ಕಾರ ಬರಲು ಸಾಧ್ಯವಿಲ್ಲ, ಹಾಗೇ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಬರಲಿದೆ. ನೀವು ನಮ್ಮ ಕ್ಷೇತ್ರದ ಅಭ್ಯರ್ಥಿ ಅನಿಲ್ ಕುಮಾರ್ ಬೆಂಬಲಿಸಿ, ನಾವು ಆಡಳಿತ ಪಕ್ಷದಲ್ಲಿ ಬರುತ್ತೇವೆ ಆಗ ಕ್ಷೇತ್ರ ಅಭಿವೃದ್ಧಿ ಕಾಣಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವೆಂಕಟಚಲಯ್ಯ, ವಿಜಯಕುಮಾರ್, ಶಿವರುದ್ರಪ್ಪ, ಮಾಜಿ ಕರ್ಪೋರೆಟರ್ ಲೋಕೇಶ್ ಗೌಡ, ಬಿಜೆಪಿ ಅಧ್ಯಕ್ಷ ಪವನ್ ಕುಮಾರ್, ರವಿಯಾದವ್, ಸೀಬಿರಂಗಮ್ಮ ಸೇರಿದಂತೆ ಅನೇಕ ಮುಖಂಡು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw