nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    • ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ
    • ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
    ರಾಜ್ಯ ಸುದ್ದಿ July 3, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    By adminJuly 3, 2026No Comments2 Mins Read
    bus.jpg

    ಸರಗೂರು: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿರುವ ‘ಜನಾಗ್ರಹ ಸಮಾವೇಶ’ದಲ್ಲಿ ಭಾಗವಹಿಸಲು ಸರಗೂರು ತಾಲ್ಲೂಕಿನಿಂದ ದಲಿತ ಸಂಘರ್ಷ ಸಮಿತಿ (ದಸಂಸ-ಅಂಬೇಡ್ಕರ್ವಾದ) ವತಿಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರು ಶುಕ್ರವಾರ ಪ್ರಯಾಣ ಬೆಳೆಸಿದರು.

    ಪ್ರಯಾಣದ ಆರಂಭಕ್ಕೂ ಮುನ್ನ ತಾಲ್ಲೂಕಿನ ಹೈರಿಗೆ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬಳಿಕ ಕಾರ್ಯಕ್ರಮಕ್ಕೆ ಅಧಿಕರ್ನಾಟಕ ಮಹಾಸಭಾದ ಎಚ್.ಡಿ. ಶಿವರಾಜು ಅವರು ಹಸಿರು ನಿಶಾನೆ ತೋರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಎಚ್.ಡಿ. ಶಿವರಾಜು ಅವರು, “ದಲಿತ ಸಮುದಾಯದ ಏಳಿಗೆ ಮತ್ತು ಹಕ್ಕುಗಳಿಗಾಗಿ ದಸಂಸ ನಿರಂತರವಾಗಿ ಶ್ರಮಿಸುತ್ತಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಅದರಂತೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಜನಾಗ್ರಹ ಸಮಾವೇಶವು ಯಶಸ್ವಿಯಾಗಲಿ ಮತ್ತು ಸಮುದಾಯಕ್ಕೆ ಅನುಕೂಲ ಕಲ್ಪಿಸುವಂತಾಗಲಿ” ಎಂದು ಹಾರೈಸಿದರು.

    ತಾಲ್ಲೂಕು ದಸಂಸ (ಅಂಬೇಡ್ಕರ್ವಾದ) ಸಮಿತಿ ಸಂಚಾಲಕರಾದ ಕೂಡಗಿ ಗೋವಿಂದರಾಜು ಮಾತನಾಡಿ, “ಈ ಮಹತ್ವದ ಸಮಾವೇಶದಲ್ಲಿ ಭಾಗವಹಿಸಲು ನಮ್ಮ ತಾಲ್ಲೂಕಿನಿಂದ ಎರಡು ಬಸ್ಗಳ ಮೂಲಕ 200ಕ್ಕೂ ಹೆಚ್ಚು ಜನರು ತೆರಳುತ್ತಿದ್ದೇವೆ. ವಿಶೇಷವಾಗಿ ಕಾಡಂಚಿನ ಭಾಗದಲ್ಲಿರುವ ಹಾಡಿಗಳು ಹಾಗೂ ಗ್ರಾಮಗಳಿಂದ ಜಮೀನು ಮತ್ತು ವಸತಿ ವಂಚಿತರಾಗಿ ನೊಂದಿರುವ ಕುಟುಂಬಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿವೆ” ಎಂದು ಮಾಹಿತಿ ನೀಡಿದರು.

    “ದಲಿತ ಸಮುದಾಯಗಳ ಭೂಮಿ ಮತ್ತು ವಸತಿ ಹಕ್ಕುಗಳಿಗಾಗಿ ನಾವು ತಾಲ್ಲೂಕು ತಹಶೀಲ್ದಾರ್ ಕಚೇರಿ ಮುಂಭಾಗ ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ನಮ್ಮ ರಾಜ್ಯ ಸಂಘಟನೆಯ ಪ್ರಧಾನ ಸಂಚಾಲಕರ ಗಮನಕ್ಕೆ ತರಲಾಗಿದೆ. ಈ ಸಮಾವೇಶದ ಮೂಲಕ ಹಿಂದುಳಿದ ವರ್ಗಗಳ ಹಾಗೂ ದಲಿತ ಸಮುದಾಯಗಳಿಗೆ ಭೂಮಿ ಸಿಗಲಿದೆ ಎಂಬ ಭರವಸೆ ನಮಗಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ದಸಂಸ ಅಂಬೇಡ್ಕರ್ ವಾದ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ದೊಡ್ಡಸಿದ್ದು, ತಾಲ್ಲೂಕು ಸಂಘಟನಾ ಸಂಚಾಲಕರಾದ ಹಾದನೂರು ಚಂದ್ರ, ಕೂಲ್ಯ ಮಹದೇವಸ್ವಾಮಿ, ಕುರ್ಣೇಗಾಲ ಕೃಷ್ಣ, ಚಂಗೌಡನಹಳ್ಳಿ ಶಿವರಾಜು, ಶಿವಕುಮಾರ್, ಮಹಿಳಾ ಘಟಕದ ಸಂಚಾಲಕಿ ಸೀರಮ್ಮ, ರೂಪಾ, ನಾಗಮಲ್ಲಿಗಮ್ಮ, ಸಪ್ನಾ, ಕುಮಾರ್, ಕೆಂಪರಾಜು ಸೇರಿದಂತೆ ಸಮುದಾಯದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹಾಸನ:  ಹಾಸನ ಜಿಲ್ಲೆಯ ರೈತರ ಪ್ರಮುಖ ಜೀವನಾಧಾರವಾಗಿರುವ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ (Downy Mildew) ರೋಗ ತೀವ್ರವಾಗಿ ವ್ಯಾಪಿಸಿದ್ದು,…

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.