nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    ರಾಜ್ಯ ಸುದ್ದಿ April 13, 2026

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    By adminApril 13, 2026No Comments1 Min Read
    congress

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ ದೆಹಲಿಗೆ ಪ್ರಯಾಣ ಬೆಳೆಸಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಲು ಈ ಶಾಸಕರು ನಿರ್ಧರಿಸಿದ್ದಾರೆ.

    ಸಚಿವ ಸಂಪುಟದಲ್ಲಿರುವ ಸುಮಾರು 20 ಹಿರಿಯ ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಮತ್ತು ಸತತವಾಗಿ ಗೆಲ್ಲುತ್ತಿರುವ ಶಾಸಕರಿಗೆ ಅವಕಾಶ ನೀಡಬೇಕು ಎಂಬುದು ದೆಹಲಿಗೆ ತೆರಳಿರುವ ಶಾಸಕರ ಪ್ರಮುಖ ಬೇಡಿಕೆಯಾಗಿದೆ.

    ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಶಾಸಕರು ದೆಹಲಿಗೆ ತೆರಳಿದ್ದಾರೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ಶಾಸಕರು ಸಮಯ ಕೇಳಿದ್ದಾರೆ.

    ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಕ್ಕೆ ಚುರುಕು ಮುಟ್ಟಿಸಲು ಸಂಪುಟ ಪುನರ್‌ ರಚನೆ ಅನಿವಾರ್ಯ ಎಂಬುದು ಅತೃಪ್ತ ಶಾಸಕರ ವಾದ. ಇದು ಕೇವಲ ಸಚಿವ ಸ್ಥಾನದ ಬೇಡಿಕೆಯಾಗಿದ್ದು, ನಾಯಕತ್ವ ಬದಲಾವಣೆಯ ಪ್ರಶ್ನೆಯಲ್ಲ ಎಂದು ಅಶೋಕ ಪಟ್ಟಣ ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನರ್‌ ರಚನೆ ಕುರಿತ ಅಂತಿಮ ನಿರ್ಧಾರವನ್ನು ವರಿಷ್ಠರೇ ಕೈಗೊಳ್ಳಲಿದ್ದಾರೆ,” ಎಂದು ತಿಳಿಸಿದ್ದಾರೆ.

    ಲಕ್ಷ್ಮಣ ಸವದಿ, ಪಿ.ಎಂ. ನರೇಂದ್ರ ಸ್ವಾಮಿ, ವಿನಯ್ ಕುಲಕರ್ಣಿ, ಪುಟ್ಟರಂಗಶೆಟ್ಟಿ, ಎಂ.ವೈ. ಪಾಟೀಲ್, ರಿಜ್ವಾನ್ ಅರ್ಷದ್ ಸೇರಿದಂತೆ 25ಕ್ಕೂ ಹೆಚ್ಚು ಶಾಸಕರು ಈ ತಂಡದಲ್ಲಿದ್ದಾರೆ.

    ಮುಂಬರುವ ಮೂರ್ನಾಲ್ಕು ದಿನಗಳ ಕಾಲ ದೆಹಲಿಯಲ್ಲೇ ಬೀಡುಬಿಡಲಿರುವ ಈ ಶಾಸಕರ ನಡೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ತುಮಕೂರು: ಜಿಲ್ಲೆಯ ಕ್ರೈಸ್ ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಧುಗಿರಿ ತಾಲೂಕು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ…

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.