ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು ಕಳೆದ ಮೂರು ದಿನಗಳಿಂದ 30 ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರ ತಂಡ ಗ್ರಾಮದಲ್ಲಿ ಬೀಡುಬಿಟ್ಟಿದೆ. ಎರಡು ಆ್ಯಂಬುಲೆನ್ಸ್ ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ಅಸ್ವಸ್ಥಗೊಂಡವರು ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ. ಊರಿನ ಬಹುತೇಕ ಜನರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


