ಶಿವಮೊಗ್ಗ: ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬಸ್ ನಲ್ಲಿದ್ದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ಹೊಡೆದ ಘಟನೆ ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ನಡೆದಿದೆ.
ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಳೆಬಾಗಿಲಿನಿಂದ ಸಾಗರಕ್ಕೆ 45 ಮಂದಿ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಎಸ್ ಬಿಕೆ ಸಂಸ್ಥೆಗೆ ಸೇರಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ 35 ವಿದ್ಯಾರ್ಥಿಗಳು ಶಾಕ್ ಗೆ ಒಳಗಾಗಿದ್ದಾರೆ.
ವಿದ್ಯುತ್ ಶಾಕ್ ನಿಂದಾಗಿ ಕೆಲವರು ಬಸ್ಸಿನೊಳಗೆಯೇ ಉರುಳಿ ಬಿದ್ದಿದ್ದಾರೆ. ಗಾಯಾಳುಗಳನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


