ತುಮಕೂರು: ವಿಷಾಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ಆಗಿರುವ ಘಟನೆ ವಿಧಾನಪರಿಷತ್ ಸದಸ್ಯರೊಬ್ಬರ ಮಾಲಿಕತ್ವದ ಪ್ರೆಸಿಡೆನ್ಸಿ ಶಾಲೆಯಲ್ಲಿ ನಡೆದಿದೆ.
ಬಿಜೆಪಿ ಎಂಎಲ್ ಸಿ ಚಿದಾನಂದ್ ಎಂ. ಗೌಡ ಮಾಲೀಕತ್ವದ ಪ್ರೆಸಿಡೆನ್ಸಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಫುಡ್ ಪಾಯಿಜನ್ ನಿಂದಾಗಿ ಜಿಲ್ಲೆಯ ಶಿರಾ ನಗರದ ಪ್ರೆಸಿಡೆನ್ಸಿ ಶಾಲೆಯಲ್ಲಿ ಮಕ್ಕಳಿಗೆ ವಾಂತಿ–ಭೇಧಿ ಕಾಣಿಸಿಕೊಂಡಿದೆ.
ಮಂಗಳವಾರ ರಾತ್ರಿ ಊಟ ಸೇವನೆ ಬಳಿ ಮಕ್ಕಳ ಆರೋಗ್ಯದಲ್ಲಿ ಏರು ಪೇರು ಕಾಣಿಸಿಕೊಂಡಿದೆ. ನಿನ್ನೆ ಏಕಾಏಕಿ ಐವತ್ತಕ್ಕೂ ಹೆಚ್ಚು ಮಕ್ಕಳಲ್ಲಿ ಕಾಣಿಸಿಕೊಂಡ ವಾಂತಿ ಭೇಧಿಯಿಂದ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಮಕ್ಕಳಿಗೆ ವಸತಿ ಶಾಲೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರೆಸಿಡೆನ್ಸಿ ಶಾಲೆಯ ಊಟದ ವ್ಯವಸ್ಥೆ ಪರಿಶೀಲನೆ ನಡೆಸಿದ ಅಧಿಕಾರಿ ವರ್ಗ. ಮೇಲ್ನೋಟಕ್ಕೆ ಊಟದ ವ್ಯತ್ಯಾಸ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಶಾಲಾ ಮಾಲೀಕ ಎಂಎಲ್ಸಿ ಚಿದಾನಂದ ಎಂ ಗೌಡ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4