ಮಂಗಳೂರು: ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿರುವ ಘಟನೆ ನಡೆದಿದೆ.
ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ. ಜೊತೆಗೆ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇರುವುದಾಗಿ ಚರ್ಚೆಗಳು ನಡೆಯುತ್ತಿದೆ.
ಘಟನೆ ಸಂಬಂಧ ಮೂಡಬಿದಿರೆ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್ ಟ್ರಾಕ್ಟ್ ಮಾಡುತ್ತಿದ್ದ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.
ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಸಂದೇಶ್ ರಿಂದ ದೂರು ನೀಡಲಾಗಿದ್ದು, ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ ಐಆರ್ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC