nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಚಾರ ನಿಯಮ ಉಲ್ಲಂಘನೆ: 6 ತಿಂಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಕ್ರಿಮಿನಲ್ ಕೇಸ್
    ರಾಜ್ಯ ಸುದ್ದಿ July 13, 2023

    ಸಂಚಾರ ನಿಯಮ ಉಲ್ಲಂಘನೆ: 6 ತಿಂಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಕ್ರಿಮಿನಲ್ ಕೇಸ್

    By adminJuly 13, 2023No Comments2 Mins Read
    cite police

    ಸಂಚಾರ ಪೊಲೀಸರು ಒನ್ ವೇ ಸಂಚಾರ, ನೋ ಪಾರ್ಕಿಂಗ್, ಫುಟ್ ಪಾತ್ರಗಳಲ್ಲಿ ಪಾರ್ಕಿಂಗ್ ಹಾಗೂ ಪಾದಚಾರಿ ರಸ್ತೆಗಳಲ್ಲಿ ವಾಹನ ನಿಲ್ಲಿಸಿದ್ದ ಸವಾರರ ವಿರುದ್ಧ ಕಳೆದ ಆರು ತಿಂಗಳಲ್ಲಿ 5, 280 ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದ್ದಾರೆ.

    ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗೂ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ದಂಡದ ಬಿಸಿ ಮುಟ್ಟಿಸಲು ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡಿರುವ ಸಂಚಾರ ಪೊಲೀಸರು, ಆತ್ಯಾಧುನಿಕ ಕ್ಯಾಮರಾಗಳ ಮೂಲಕ ಸಂಪರ್ಕರಹಿತವಾಗಿ ಉಲ್ಲಂಘನಾ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ.

    ಆದಾಗ್ಯೂ ನಗರದಲ್ಲಿ ನೋ ಎಂಟ್ರಿಯಲ್ಲಿ ವಾಹನ ಸಂಚಾರ, ನೋ ಪಾರ್ಕಿಂಗ್ ಹಾಗೂ ಫುಟ್ ಪಾತ್‌ ನಲ್ಲಿ ವಾಹನ ಸಂಚಾರದಿಂದಾಗಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗಿವೆ. ಕಳೆದ ಆರು ತಿಂಗಳಲ್ಲಿ ಸಂಭವಿಸಿದ 2, 354 ಅಪಘಾತಗಳಲ್ಲಿ 414 ಮಂದಿ ಬಲಿಯಾಗಿದ್ದಾರೆ. 2096 ವಾಹನ ಸವಾರರು ಗಾಯಗೊಂಡಿದ್ದಾರೆ. ಪ್ರತಿ ತಿಂಗಳು ಸರಾಸರಿ 70 ಮಂದಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವುದು ಕಳವಳಕಾರಿಯಾಗಿದೆ.

    ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಿಸಿಕೊಂಡರೂ ಎಚ್ಚೆತ್ತುಕೊಳ್ಳದ ಸವಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಇದಕ್ಕೆ ಕ್ಯಾರೆ ಅನ್ನದ ಸವಾರರ ವಿರುದ್ಧ ಐಪಿಸಿ ಸೆಕ್ಷನ್ 283ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಪಾರ್ಕಿಂಗ್ ಮಾಡಿದ್ದ ಸವಾರರ ವಿರುದ್ಧ 697 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದೇ ರೀತಿ ಫುಟ್ ಪಾತ್‌ನಲ್ಲಿ ವಾಹನ ಸಂಚಾರದಡಿ 118, ಒನ್ ವೇ ಮಾರ್ಗದಲ್ಲಿ ಸಂಚರಿಸಿದವರ ವಿರುದ್ಧ 1772 ಕೇಸ್ ದಾಖಲಾದರೆ, ನೋ ಪಾರ್ಕಿಂಗ್ ಹಾಗೂ ರಾಂಗ್ ಪಾರ್ಕಿಂಗ್ ಮಾಡಿದ 2693 ಪ್ರಕರಣ ದಾಖಲಿಕೊಳ್ಳಲಾಗಿದ್ದು, ಒಟ್ಟು 5280 ಕೇಸ್ ದಾಖಲಾಗಿವೆ.

    ದಿನೇ ದಿನೇ ನಗರದಲ್ಲಿ ಅಪಘಾತ ಪ್ರಮಾಣ ಹೆಚ್ಚಾಗುತ್ತಿದೆ. ರಸ್ತೆ ಗುಣಮಟ್ಟ ಕಳಪೆ ಸೇರಿದಂತೆ ಮೂಲಭೂತ ಸೌಕರ್ಯ ಕೊರತೆಯಿಂದ ಕೆಲವೆಡೆ ಅಪಘಾತ ಸಂಭವಿಸಿದರೆ ಮತ್ತೊಂದೆಡೆ ವೇಗದ ಚಾಲನೆ, ಹೆಮ್ಮೆಟ್ ಧರಿಸದಿರುವುದು, ಸೀಟ್ ಬೆಲ್ಟ್ ಧರಿಸದೆ ವಾಹನ ಸಂಚಾರದಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಟ್ರಾಫಿಕ್ ಪೊಲೀಸರು ಸಹ ಹೆಚ್ಚಾಗಿ ಅಫಘಾತ ನಡೆಯುವ 60 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದ್ದಾರೆ. ಕಳೆದ
    ಆರು ತಿಂಗಳಲ್ಲಿ 45 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ ಎನ್ ಅನುಚೇತ್ ಮಾಹಿತಿ ನೀಡಿದ್ದಾರೆ.

    ಟ್ರಾಫಿಕ್ ಕಂಟ್ರೋಲ್‌ಗೆ ಡೋನ್ ಕ್ಯಾಮರಾಗಳ ಬಳಕೆ:

    ಕಳೆದ ತಿಂಗಳು ಸಂಚಾರ ದಟ್ಟಣೆಯನ್ನು ಶತಾಯಗತಾಯ ಕಡಿಮೆ ಮಾಡಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪಣ ತೊಟ್ಟಿದ್ದ ಸಂಚಾರಿ ಪೊಲೀಸರು ಡೋನ್ ಕ್ಯಾಮರಾ ಬಳಕೆಗೆ ಮುಂದಾಗಿದ್ದರು. ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಹೆಬ್ಬಾಳ, ಗೊರಗುಂಟೆಪಾಳ್ಯ, ಟಿನ್ ಫ್ಯಾಕ್ಟರಿ ಬ್ರಿಡ್ಜ್, ಬನಶಂಕರಿ, ಸಾರಕ್ಕಿ ಜಂಕ್ಷನ್, ಇಬ್ಬಲೂರು ಹಾಗೂ ಟ್ರಿನಿಟಿ ವೃತ್ತ ಸೇರಿದಂತೆ 20ಕ್ಕೂ ಹೆಚ್ಚು ಜಂಕ್ಷನ್‌ಗಳನ್ನು ಗುರುತಿಸಲಾಗಿತ್ತು. ಸೇಫ್ ಸಿಟಿ ಯೋಜನೆಯಡಿ ಎಂಟು ಡೋನ್ ಕ್ಯಾಮರಾ ಖರೀದಿಸಲಾಗಿತ್ತು. ಈ ಪೈಕಿ 4 ಡೋನ್‌ಗಳನ್ನು ಸಂಚಾರ ವಿಭಾಗಕ್ಕೆ ಹಂಚಿಕೆ ಮಾಡಿ, ಟ್ರಾಫಿಕ್ ಕಂಟ್ರೋಲ್‌ಗೆ ಸಂಚಾರಿ ಪೊಲೀಸರು ಮುಂದಾಗಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ…

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.