ತುಮಕೂರು: ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಸಂದ್ರ ಹೋಬಳಿ ಜೋಡಿ ಗಟ್ಟೆ ಗ್ರಾಮದ ಬಳಿ ಸರ್ಕಾರಿ ಬಸ್ಸು ಮತ್ತು ಇನ್ನೋವಾ ಕಾರ್ ನಡುವೆ ನಡೆದ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.
ಇನ್ನೋವಾ ಕಾರಿನ ಚಾಲಕನ ಆಚಾತುರ್ಯವೇ ಈ ಒಂದು ಅಪಘಾತಕ್ಕೆ ಕಾರಣವೆಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ ಪರಿಶೀಲನೆ ನಡೆಸಿದರು. ಅಲ್ಲದೆ ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಘಟನೆ ಸಂಬಂಧಿಸಿದಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA