ಶಕ್ತಿ ಯೋಜನೆಯ ಫಲಾನುಭವಿಗಳು ದಸರಾಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ಮಹಿಳಾ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಡಿಜಿಪಿ ಅಲೋಕ್ ಮೋಹನ್ ಸೂಚಿಸಿದರು.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಕ್ಷಿಣ ವಲಯದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಅವರು, ಉಚಿತ ಬಸ್ ವ್ಯವಸ್ಥೆ ಇರುವುದರಿಂದ ನಗರ ಮತ್ತು ಗ್ರಾಮಾಂತರ ನಿಲ್ದಾಣ, ರೈಲು ನಿಲ್ದಾಣ, ಅರಮನೆ ಆವರಣ, ಫಲಪುಷ್ಪ ಪ್ರದರ್ಶನ, ಯುವ ಸಂಭ್ರಮ, ಯುವ ದಸರಾ ಹೆಚ್ಚುವರಿ ಮಹಿಳಾ ಸಿಬ್ಬಂದಿ ನಿಯೋಜಿಸಬೇಕು ಎಂದರು.