ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ಈ ಕೂಂಬಿಂಗ್ ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q