ಮಂಡ್ಯ: ಮಕ್ಕಳ ಜೊತೆಗೆ ತಾಯಿಯೊಬ್ಬಳು ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ.
ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಧನಂಜಯ್ ಅವರ ಪತ್ನಿ ವಿದ್ಯಾ ಪಾಂಡವಪುರ ಪಟ್ಟಣದ ಹಾರೋಹಳ್ಳಿ ಗ್ರಾಮದವರಾಗಿದ್ದು, ಅವರ ಮಕ್ಕಳಾದ ಲಿತಿಶಾ (8) ಮತ್ತು ಕಿಶನ್ (2) ಅವರೊಂದಿಗೆ ವಿಶ್ವೇಶ್ವರಯ್ಯ ಕಾಲುವೆಗೆ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 8.30 ರವರೆಗೆ ಹುಡುಕಾಟ ನಡೆಸಲಾಗಿದ್ದರೂ, ಮಕ್ಕಳ ಶವಗಳು ಪತ್ತೆಯಾಗಿಲ್ಲ. ಆದರೆ, ಪ್ರಾಣಾಪಾಯದಿಂದ ಪಾರಾದ ವಿದ್ಯಾ, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಮತೋಲನ ತಪ್ಪಿ ಕಾಲುವೆಗೆ ಬಿದ್ದಿದ್ದೇವೆ ಎಂದು ಹೇಳಿದ್ದಾರೆ.
ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲಿಗೆ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಣೆ ಮಾಡಿದ್ದು ದುರಾದೃಷ್ಟ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4